ವಿಜಯಸಾಕ್ಷಿ ಸುದ್ದಿ, ಮೈಸೂರು
ನಕಲಿ ದಾಖಲೆ ಸೃಷ್ಟಿಸಿ ಅತಿಕ್ರಮವಾಗಿ ಪ್ರವೇಶಕ್ಕೆ ಪ್ರಯತ್ನ ಮಾಡಿದ್ದಲ್ಲದೆ, ಕೊಲೆ ಬೆದರಿಕೆ ಹಾಕಿ ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ದಕ್ಕೆ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರ ಪುತ್ರನ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಜಿಪಂ ಸದಸ್ಯ ಅಮಿತ್ ದೇವರಹಟ್ಟಿ ವಿರುದ್ದ ಎಫ್ ಐಆರ್ ದಾಖಲಾಗಿದೆ. ನಗರದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಹಿನಕಲ್ ಬಳಿಯ ಖಾಲಿ ನಿವೇಶನಕ್ಕೆ ಅವರು ಅತಿಕ್ರಮವಾಗಿ ಪ್ರವೇಶ ಮಾಡಿದ್ದರು. ಅಲ್ಲದೇ, ಕಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದರು.
ಇದನ್ನು ತಡೆಯಲು ಬಂದ ಮೂಲ ವಾರಸುದಾರ ಯೋಗೀಶ್ ಎಂಬುವವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದರು.
ಹೀಗಾಗಿ ನಿವೇಶನದ ಮೂಲ ಮಾಲೀಕ ಯೋಗೀಶ್ ನೀಡಿದ ದೂರಿನನಂತೆ ಪೊಲೀಸರು ಐಪಿಸಿ ಸೆಕ್ಷನ್ 504 , 506 ರ ಅಡಿ ಎಫ್ ಐಆರ್ ದಾಖಲಿಸಲಾಗಿದೆ. ಪಟೇಲ್ , ಅನೂಪ್, ವೈಕುಂಠಾಚಾರ್ ಸೇರಿದಂತೆ ಎಂಟು ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ವಿಶ್ವನಾಥ್ ಅವರ ಪುತ್ರ ಅಮಿತ್ ದೇವರಹಟ್ಟಿ ಮೂರನೇ ಆರೋಪಿಯಾಗಿದ್ದಾರೆ.