ಸಚಿವ, ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

0
Spread the love

ವಿಜಯಸಾಕ್ಷಿ ಸುದ್ದಿ, ಕಲಬುರಗಿ

Advertisement

ನಾನೀಗ ಬಿಜೆಪಿ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ನಾನು ಹುದ್ದೆ ಹುಡುಕಿಕೊಂಡು ಹೋಗಿಲ್ಲ. ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿಭಾಯಿಸುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿದರು.

ಕಲಬುರಗಿಯಲ್ಲಿ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನ, ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ.
ಯಡಿಯೂರಪ್ಪನವರು ಕೂಡ ರಾಜೀನಾಮೆ ನೀಡುವಾಗ ಯಾವುದೇ ಬೇಡಿಕೆ ಇಟ್ಟಿರಲಿಲ್ಲ.
ನನಗೆ ಇನ್ನೂ ವಯಸ್ಸಿದೆ. ಸದ್ಯ ಪಕ್ಷದ ಸಂಘಟನೆಗೆ ನಾನು ಹೆಚ್ಚಿನ ಗಮನ ಹರಿಸಲಿದ್ದೇನೆ ಎಂದರು.

ಸಂಪುಟ ರಚನೆ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿಎಂ ಎಲ್ಲ ಭಿನ್ನಾಭಿಪ್ರಾಯ ಬಗೆಹರಿಸುತ್ತಾರೆ. ಇತರೆ ಪಕ್ಷಗಳಿಂದ ಬಿಜೆಪಿಗೆ ಬಂದ 17 ಶಾಸಕರಲ್ಲಿ ಆನಂದ ಸಿಂಗ್ ಮೊದಲಿಗರು. ಅವರಿಗೆ ಗೌರವ ನೀಡುವುದು ನಮ್ಮ ಕರ್ತವ್ಯ, ಅದನ್ನು ಮುಖ್ಯಮಂತ್ರಿಗಳು ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೊಮ್ಮಾಯಿ ಸರ್ಕಾರ ತನ್ನ ಅವಧಿ ಪೂರ್ಣಗೊಳಿಸಲಿದೆ. ಸಂಪುಟದಲ್ಲಿ
ಕಲಬುರಗಿ ಜಿಲ್ಲೆಗೆ ಪ್ರಾತಿನಿಧ್ಯ ಸಿಗಬೇಕಿತ್ತು. ಕಲಬುರಗಿಯ ಅಳಿಯನಾಗಿದ್ದು, ಜಿಲ್ಲೆಗೆ ಸಚಿವ ಸ್ಥಾನ ಸಿಗದಿರುವುದು ನನಗೂ ವೈಯಕ್ತಿಕವಾಗಿ ಬೇಸರ ತಂದಿದೆ. ಇನ್ನೂ ನಾಲ್ಕು ಸಚಿವ ಸ್ಥಾನ ಖಾಲಿಯಿವೆ. ಈ ಭಾಗಕ್ಕೆ ನ್ಯಾಯ ದೊರಕಿಸಲು ಪ್ರಯತ್ನಿಸುತ್ತೇನೆ. ಜಿಲ್ಲೆಗೆ ಸೂಕ್ತ ಸ್ಥಾನಮಾನ ಸಿಗುವ ವಿಶ್ವಾಸವಿದೆ ಎಂದು ವಿಜಯೇಂದ್ರ ಹೇಳಿದರು.

ಕಮಲ‌ ಅರಳಿಸಲು ಪಣ

ಬಿಬಿಎಂಪಿ, ಗುಲ್ಬರ್ಗಾ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮಹಾನಗರ ಪಾಲಿಕೆಗಳಿಗೆ ಚುನಾವಣೆ ಘೋಷಣೆಯಾಗಿದೆ. ಪ್ರತಿ ವಾರ್ಡನಲ್ಲೂ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಿ ಎಲ್ಲಡೆ ಕಮಲ‌ ಅರಳಿಸಲಾಗುವುದು ಎಂದು ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಈ ಚುನಾವಣೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಲಿದೆ. ಮುಂಬರುವ ಸಿಂದಗಿ, ಹಾನಗಲ್ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಜಯಶಾಲಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here