HomeGadag Newsಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನರಗುಂದ ವಿಧಾನಸಭಾ ಕ್ಷೇತ್ರದ ವತಿಯಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಧರಣಿ ಹಾಗೂ ಪ್ರತಿಭಟನೆ ನಡೆಯಿತು.

ನರಗುಂದ, ಹೊಳೆಆಲೂರು ಹಾಗೂ ಲಕ್ಕುಂಡಿ ಮಂಡಲಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು, ಪ್ರಕರಣಕ್ಕೆ ಸಂಬಂಧಿಸಿದ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಕ್ಷೇತ್ರದ ಯುವ ಮುಖಂಡ ಉಮೇಶಗೌಡ ಪಾಟೀಲ, ಮಂಡಲ ಅಧ್ಯಕ್ಷರಾದ ನಾಗನಗೌಡ ತಿಮ್ಮನಗೌಡ್ರ, ಸೋಮಶೇಖರಪ್ಪ ಚರೇದ, ಪ್ರಕಾಶ ಅರಹುಣಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಂ. ಕೊರಿಗಣ್ಣವರ, ಸುರೇಶ ಗಾಣಿಗೇರ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಎಂ.ಎಸ್. ಕರೀಗೌಡ್ರ, ವಸಂತ ಮೇಟಿ, ಈಶಪ್ಪ ನಾಯ್ಕರ, ಪ್ರದೀಪ ನವಲಗುಂದ, ರವಿಕಾಂತ ಅಂಗಡಿ, ಮುತ್ತಣ್ಣ ಜಂಗಣ್ಣವರ, ಚಂದ್ರು ದಂಡಿನ, ಅಶೋಕ ಹೆಬ್ಬಳ್ಳಿ, ಮಹೇಶ ಮುಸ್ಕಿನಭಾವಿ, ಅನೀಲ ದರಿಯಣ್ಣವರ, ಪ್ರವೀಣ ಯಲಿಗಾರ, ಸೋಮನಗೌಡ ಹುಡೇದಮನಿ, ಶರಣು ಬರಶೆಟ್ಟ, ಶಿವಕುಮಾರ ನೀಲಗುಂದ, ಶಶಿಧರಗೌಡ ಪಾಟೀಲ, ಬಸವರಾಜ ಚಲವಾದಿ, ಸುರೇಶ ಚಲವಾದಿ, ಅನೀಲ ಅಬ್ಬಿಗೇರಿ, ಸಂತೋಷ ಅಕ್ಕಿ, ಪ್ರಶಾಂತ ನಾಯ್ಕರ, ವಾಯ್.ಪಿ. ಅಡ್ನೂರ, ಡಿ.ವಾಯ್. ಹುನುಗುಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img