ವಿಜಯಸಾಕ್ಷಿ ಸುದ್ದಿ, ಬೆಳಗಾವಿ
Advertisement
ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಶುರುವಾಗಿದ್ದು, ಈ ಮಧ್ಯೆ ಬೆಳಗಾವಿಯಿಂದ ಬಂಡಾಯದ ಧ್ವನಿ ಕೇಳಿಬಂದಿದೆ.
ಮೂರು ಬಾರಿ ಶಾಸಕರಾಗಿರುವ ಸವದತ್ತಿ- ಯಲ್ಲಮ್ಮ ಕ್ಷೇತ್ರದ ಶಾಸಕ, ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು. ಆದರೆ, ಈವರೆಗೆ ಫೋನ್ ಕರೆ ಬಾರದ ಕಾರಣ ಸ್ಥಾನ ಸಿಗೋದಿಲ್ಲ ಎಂಬುದು ಖಾತ್ರಿಯಾಗಿದ್ದು, ತೀವ್ರ ಅಸಮಾಧಾನಗೊಂಡಿದ್ದಾರೆ.
ಈವರೆಗೂ ನನಗೆ ಕಾಲ್ ಬಂದಿಲ್ಲ. ಈ ಕುರಿತು ಬಿ.ಎಸ್. ವೈ ಜೊತೆ ಮಾತನಾಡುವೆ, ಸಚಿವ ಸ್ಥಾನ ಸಿಗದಿದ್ದರೆ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಹೇಳಿದ್ದಾರೆ.