ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರ ಬೇಡಿಕೆ ಹಾಗೂ ಆದ್ಯತೆ ಮೇರೆಗೆ ಪುನಃ ಬಸ್ ಸಂಚಾರ ಆರಂಭ ಮಾಡಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ ಬಸ್ ಗಳು ಕಾರ್ಯಾಚರಣೆ ಮಾಡಲಿದ್ದು, ಮೈಸೂರು ಜಿಲ್ಲೆ ಹೊರತು ಪಡಿಸಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಬಸ್ಸುಗಳ ಸಂಚಾರ ಆರಂಭಿಸಿವೆ.
ರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗೆ ಕೋವಿಡ್ ಲಸಿಕೆ ಕಡ್ಡಾಯ ಮಾಡಲಾಗಿದ್ದು,
ಈಗಾಗಲೇ ಶೇ% 92 ರಷ್ಟು ಸಿಬ್ಬಂದಿಗಳಿಗೆ ಲಸಿಕೆ ಪೂರ್ಣ ಮಾಡಲಾಗಿದೆ.
ಪ್ರಯಾಣಿಕರ ಬೇಡಿಕೆಗನುಗುಣವಾಗಿ ಬಸ್ ಗಳ ಕಾರ್ಯಾಚರಣೆ ನಡೆಸಲಾಗುತ್ತಿದೆ. ಪ್ರಯಾಣಿಕರು ಕಡ್ಡಾವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಬೇಕು. ಪ್ರಯಾಣಿಕರು ಕುಳಿತುಕೊಳ್ಳುವ ಮೂರು ಆಸನಗಳಲ್ಲಿ ಇಬ್ಬರಿಗೆ ಹಾಗೂ ಎರಡು ಆಸನದಲ್ಲಿ ಒಬ್ಬರಿಗೆ ಮಾತ್ರ ಕುಳಿತುಕೊಳ್ಳಲು ಅವಕಾಶ ಮಾಡಲಾಗಿದೆ. ಚಾಲನಾ ಸಿಬ್ಬಂದಿಗಳು ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದ್ದು, ಅಂತಹ ಸಿಬ್ಬಂದಿಗಳಿಗೆ ಮಾತ್ರ ಕರ್ತವ್ಯ ನಿರ್ವಹಣೆಗೆ ಸೂಚಿಸಲಾಗಿದೆ.
ಅಂತರ್ ಜಿಲ್ಲಾ ಬಸ್ ಸಂಚಾರ
ಅಂತರ್ ಜಿಲ್ಲಾ ಬಸ್ ಸಂಚಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸುಮಾರು 200 ಬಸ್ ಗಳು ರಸ್ತೆಗಿಳಿಯಲಿವೆ. ಪ್ರಯಾಣಿಕರ ಬೇಡಿಕೆಗೆ ಅನುಸಾರವಾಗಿ ಬಸ್ ಸಂಖ್ಯೆ ಹೆಚ್ಚಳ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.