ವಿಜಯಸಾಕ್ಷಿ ಸುದ್ದಿ, ಕಲಬುರಗಿ
ಸನ್ನಡತೆಯ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 18 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಸೆಂಟ್ರಲ್ ಜೈಲಿನಿಂದ 16 ಜನ ಪುರುಷರು ಹಾಗೂ ಇಬ್ಬರು ಮಹಿಳಾ ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಬಿಡುಗಡೆ ಮಾಡಲಾಗಿದೆ.
ಸನ್ನಡತೆಯ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 125 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ ನೀಡಿತ್ತು. ಸರ್ಕಾರದ ಆದೇಶದಂತೆ ಕಲಬುರಗಿ ಸೆಂಟ್ರಲ್ ಜೈಲಿನಿಂದ 18 ಜನ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.
ಜಿಲ್ಲೆಯ ಹೊರವಲಯದ ನಂದಿಕೂರ ಗ್ರಾಮದ ಬಳಿಯಿರುವ ಸೆಂಟ್ರಲ್ ಜೈಲ್ ನಲ್ಲಿ ಕೈದಿಗಳಿಗೆ ಬಿಡುಗಡೆ ಪ್ರಮಾಣ ಪತ್ರವನ್ನು ಕಾರಾಗೃಹದ ಮುಖ್ಯ ಅಧೀಕ್ಷಕ ಅಧೀಕ್ಷಕ ಪಿ.ಎಸ್. ರಮೇಶ್ ನೀಡಿದ್ದಾರೆ.



