Advertisement
ವಿಜಯಸಾಕ್ಷಿ ಸುದ್ದಿ, ವಿಜಯಪುರ
ರಾಜ್ಯದ ಠಾಣೆಗಳಲ್ಲಿನ ಪೊಲೀಸರು ಕೇಸರಿ ಮಯಯಾಗುತ್ತಿದ್ದಾರೆ. ಒಬ್ಬರೋ ಇಬ್ಬರೋ ಬೇಕಾದ್ರೆ ಕೇಸರಿ ವಸ್ತ್ರಗಳನ್ನು ಹಾಕಿಕೊಳ್ಳಲಿ. ಆದರೆ, ಠಾಣೆಯ ಎಲ್ಲಾ ಅಧಿಕಾರಿ, ಸಿಬ್ಬಂದಿ ಕೇಸರಿಯಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಸಿಂದಗಿಯ ಮೊರಟಿಗಿಯಲ್ಲಿ ಪ್ರಚಾರದ ವೇಳೆ ರಾಜ್ಯದಲ್ಲಿ ಪೊಲೀಸ್ ಇಲಾಖೆ ಕೇಸರೀಕರಣ ಆರೋಪ ಸಮರ್ಥಿಸಿಕೊಂಡ ಮಾಜಿ ಸಿಎಂ, ಈ ವಿಚಾರವನ್ನು ನಾನು ಟ್ವೀಟ್ ಮೂಲಕ ಖಂಡಿಸಿದ್ದೇನೆ.
ಬಿಜೆಪಿ, ಆರ್.ಎಸ್.ಎಸ್. ಏನಾದರೂ ಮಾಡಿಕೊಳ್ಳಲಿ. ಆದರೆ, ಸರ್ಕಾರಿ ಇಲಾಖೆಗಳು, ಅಧಿಕಾರಿಗಳನ್ನೇ ಕೇಸರಿಕರಣ ಮಾಡೋದು ಎಷ್ಟು ಸರಿ. ಕೇಸರಿ ಜೊತೆ ತ್ರಿಶೂಲವನ್ನೂ ಕೈಯಲ್ಲಿ ಕೊಟ್ಟುಬಿಡಿ ಎಂದು ವ್ಯಂಗ್ಯವಾಗಿ ಹೇಳಿದ್ದೆ ಎಂದು ಸಮರ್ಥಿಸಿಕೊಂಡರು.