ವಿಜಯಸಾಕ್ಷಿ ಸುದ್ದಿ, ಗದಗ: ಅಮ್ಮ ಫೌಂಡೇಶನ್ (ರಿ.), ಬೆಂಗಳೂರು ವತಿಯಿಂದ ಗದಗ ಜಿಲ್ಲಾ ನೌಕರರ ಭವನದಲ್ಲಿ ತಾಲೂಕು ಮಟ್ಟದ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಸಮಾರಂಭ ನಡೆಯಿತು.
ಜಿಲ್ಲೆಯ ಪ್ರತಿಯೊಂದು ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐವರು ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೊತೆಗೆ ಸುಮಾರು 300ಕ್ಕೂ ಹೆಚ್ಚು ಸಾಧಕರು ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದ ಸಾಧಕರಿಗೆ ‘ಬಸವ ಕೃಷಿ ರತ್ನ’, ಮಾಜಿ ಸೈನಿಕರಿಗೆ ‘ಬಸವನಾಡ ರಕ್ಷಕ ಪ್ರಶಸ್ತಿ’, ಶಿಕ್ಷಕರಿಗೆ ‘ಬಸವ ಬೆಳಕು ಪ್ರಶಸ್ತಿ’, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ‘ಬಸವ ಭಾರತಿ ಪ್ರಶಸ್ತಿ’ ಹಾಗೂ ಕಲಾವಿದರಿಗೆ ‘ಬಸವ ಕಲಾಶಿಖರ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ಲಕ್ಷ್ಮೇಶ್ವರ ತಾಲೂಕಿನ ಸಂಕದಾಳ ಗ್ರಾಮದ ಪ್ರಗತಿಪರ ರೈತ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದುರಗಪ್ಪ ಬಸಪ್ಪ ಹರಿಜನ ಅವರ ಕೃಷಿ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ‘ಬಸವ ಕೃಷಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅದೇ ಗ್ರಾಮದ ನೀಲನಗೌಡ ರಾಮನಗೌಡ ಪಾಟೀಲ, ಹಾಲಶಂಕ್ರಪ್ಪ ಮಲ್ಲಪ್ಪ ಸೂರಣಗಿ, ಪಕ್ಕೀರಯ್ಯ ಹಿರೇಮಠ ಹಾಗೂ ಹಾಲನಗೌಡ ಬಸನಗೌಡ ಪಾಟೀಲ ಅವರ ಕೃಷಿ ಸಾಧನೆಯನ್ನು ಗುರುತಿಸಿ ಅವರಿಗೂ ‘ಬಸವ ಕೃಷಿ ರತ್ನ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಸನ್ಮಾನಿತರಿಗೆ ಅಮ್ಮ ಫೌಂಡೇಶನ್‌ನ ಮಾರ್ಗದರ್ಶಕ ಬಸವರಾಜ ಬಳ್ಳಾರಿ, ಅಧ್ಯಕ್ಷ ಮೈಲಾರಪ್ಪ ಡಿ.ಎಚ್. ವಕೀಲ, ಖಜಾಂಚಿ ಮಾರುತಿ ಜಿ.ಎಚ್., ಕಾರ್ಯದರ್ಶಿ ವಿಶ್ವನಾಥ ದಲಾಲಿ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಶುಭ ಹಾರೈಸಿದರು



