ವಿಜಯಸಾಕ್ಷಿ ಸುದ್ದಿ, ಮೈಸೂರು
ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡಿರುವ ಎಸ್.ಎ.ರಾಮದಾಸ್ ಸಿಎಂ ಜಿಲ್ಲೆಗೆ ಭೇಟಿ ನೀಡಿದರೂ ಭೇಟಿಯಾಗದೆ ಅಂತರ ಕಾಯ್ದುಕೊಂಡರು. ನಂತರ ನಡೆದ ಅಭಿನಂದನಾ ಸಮಾರಂಭ ಹಾಗೂ ಜಿಲ್ಲೆಯ ಕೋವಿಡ್ ನಿಯತ್ರಣ ಸಭೆಗೂ ಶಾಸಕ ರಾಮದಾಸ್ ಸುಳಿಯಲಿಲ್ಲ. ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮದಾಸ್ ಸಿಎಂ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ದಾಮದಾಸ್ ನನ್ನ ಹಳೆಯ ಸ್ನೇಹಿತ. ಸಚಿವ ಸ್ಥಾನ ಸಿಗದಿದಕ್ಕೆ ಅಸಮಾಧಾನವಾಗಿದೆ. ಅವರನ್ನು ಭೇಟಿಯಾಗಿ ಮಾತನಾಡುತ್ತೇನೆ. ಶೀಘ್ರ ಎಲ್ಲ ಗೊಂದಲ ಬಗೆಹರಿಯಲಿದೆ ಎಂದರು.



