HomeDharwadಸಿಬ್ಬಂದಿಗೆ ತಾಂತ್ರಿಕ ತರಬೇತಿ ಅಗತ್ಯವಿದೆ

ಸಿಬ್ಬಂದಿಗೆ ತಾಂತ್ರಿಕ ತರಬೇತಿ ಅಗತ್ಯವಿದೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಇಂದು ಪೊಲೀಸ್ ಇಲಾಖೆಗೆ ವಿವಿಧ ವಿಷಯಗಳ ಪದವಿ, ಸ್ನಾತಕೋತ್ತರ ಪದವೀಧರರು ಸೇರಿಕೊಳ್ಳುತ್ತಿದ್ದಾರೆ. ಅವರಿಗೆ ಇಂದು ಅಕ್ಷರಸ್ಥರು, ಅನಕ್ಷರಸ್ಥರು ಎಂಬ ಬೇಧವಿಲ್ಲದೆ ಬಹುತೇಕರನ್ನು ವಂಚಿಸುತ್ತಿರುವ ಸೈಬರ್ ಕ್ರೈಂಮ್ ಬಗ್ಗೆ ಮತ್ತು ಅಪರಾಧಿಗಳನ್ನು ಶಿಕ್ಷೆಗೆ ಒಳಪಡಿಸಲು ಅಗತ್ಯವಿರುವ ಸಾಕ್ಷಿ ಸಂಗ್ರಹ, ತನಿಖೆಗೆ ಅಗತ್ಯವಿರುವ ತಾಂತ್ರಿಕ ಜ್ಞಾನದ ತರಬೇತಿ ನೀಡಬೇಕೆಂದು ನಿವೃತ್ತ ಪೊಲೀಸ್ ಅಧೀಕ್ಷಕ ಎ.ಎಸ್. ಮಗೆಣ್ಣವರ ಹೇಳಿದರು.

ಅವರು ಮಂಗಳವಾರ ಬೆಳಿಗ್ಗೆ ಧಾರವಾಡ ಪೊಲೀಸ್ ಇಲಾಖೆ ಜಿಲ್ಲಾ ಸಶಸ್ತç ಮೀಸಲು ಪೊಲೀಸ್ ಪಡೆಯ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಮತ್ತು ಸೇವಾ ನೀವೃತ್ತರಿಗೆ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಅಪರಾಧ ಪ್ರಕರಣಗಳನ್ನು ಪತ್ತೆ ಮಾಡಿದರೆ ಸಾಲದು. ಅಪರಾಧಿಗಳು ಮಾಡಿದ ಅಪರಾಧ ಸಾಬೀತಾಗಿ, ಅವರಿಗೆ ಶಿಕ್ಷೆ ಆಗುವವರೆಗೆ ಪಾಲೋಅಫ್ ಮಾಡಬೇಕು. ಸಾರ್ವಜನಿಕರ ಸಹಕಾರವಿಲ್ಲದೆ ನಮ್ಮ ಕರ್ತವ್ಯ ಪೂರ್ಣವಾಗುವುದಿಲ್ಲ. ಸಾರ್ವಜನಿಕರ ಶಾಂತಿ, ಸುರಕ್ಷತೆ ಮತ್ತು ಸುವ್ಯವಸ್ಥೆ ಬಗ್ಗೆ ಪೊಲೀಸ್ ಇಲಾಖೆ ಕಾಳಜಿ ವಹಿಸುವದರಿಂದ ಜನರೊಂದಿಗೆ ಇಲಾಖೆಯ ಸಂಬಂಧ ಉತ್ತಮವಾಗಿ ಬೆಳೆಯುತ್ತದೆ ಎಂದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ ಸ್ವಾಗತಿಸಿ, ಕಳೆದ ಸಾಲಿನ ಪೊಲೀಸ್ ಕಲ್ಯಾಣ ಚಟುವಟಿಕೆಗಳ ವರದಿ ಮಂಡಿಸಿದರು. ಆಕಾಶವಾಣಿ ಹಿರಿಯ ಉದ್ಘೋಷಕಿ ಮಾಯಾ ರಾಮನ್ ಕಾರ್ಯಕ್ರಮ ನಿರೂಪಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾರಾಯಣ ಬರಮನಿ ವಂದಿಸಿದರು.

ಕಾರ್ಯಕ್ರಮದಲ್ಲಿ ಧಾರವಾಡ ಕೇಂದ್ರ ಕಾರಾಗೃಹ ಅಧೀಕ್ಷಕ ಡಾ. ಕೆ.ಎಂ. ಮರಿಗೌಡ ಸೇರಿದಂತೆ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು, ಎಲ್ಲ ಠಾಣೆಗಳ ಸಿಪಿಐಗಳು, ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್ ಕುಟುಂಬಗಳ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.

ಆಕರ್ಷಕ ಪಥಸಂಚಲನ

ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪರೇಡ್ ಕಮಾಂಡರ್, ಜಿಲ್ಲಾ ಸಶಸ್ತç ಮೀಸಲು ಪಡೆಯ ಆರ್‌ಪಿಐ ವಿಠ್ಠಲ ಟಿ.ಕೋಕಟನೂರ ಹಾಗೂ 2ನೇ ಪರೇಡ್ ಕಮಾಂಡರ್ ಆರ್.ಎಸ್. ಗುಡನಟ್ಟಿ ಅವರ ನಾಯಕತ್ವದಲ್ಲಿ ಆಕರ್ಷಕ ಪಥ ಸಂಚಲನ ಜರುಗಿತು. ಪಥಸಂಚಲನದ ವಿವಿಧ ತಂಡಗಳಿಗೆ ಮಲ್ಲನಗೌಡ ಗುತ್ತರಗಿ, ಮಂಜುನಾಥ ಕುರಗೋಡ, ಆನಂದಕುಮಾರ.ಬಿ., ಮಲ್ಲಿಕಾರ್ಜುನ ನರಗುಂದ, ಲಕ್ಷ್ಮಿ ದೇಗಿನಾಳ ಮತ್ತು ವಾಸು ರಕ್ಷೇದ ನೇತೃತ್ವ ವಹಿಸಿದ್ದರು. ಆರ್.ಎಸ್.ಐ. ವೈ.ಎಫ್. ಭಜಂತ್ರಿ ಹಾಗೂ ಸ್ಟಿಕ್ ಮೇಜರ್ ಸಾಗರ ಬಸರಕೋಡಿ ಅವರ ತಂಡ ಹಿನ್ನಲೆ ಸಂಗೀತದೊಂದಿಗೆ ಪೊಲೀಸ್ ಬ್ಯಾಂಡ್ ನುಡಿಸಿತು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!