ವಿಜಯಸಾಕ್ಷಿ ಸುದ್ದಿ, ದಾವಣಗೆರೆ
ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗಲು ಹೋಂ ಐಸೋಲೇಷನ್ ನಲ್ಲಿರುವ ಸೋಂಕಿತರು ಕಾರಣ. ಹೀಗಾಗಿ ಇನ್ನು ಮುಂದೆ ಕೊರೊನಾ ಸೋಂಕಿತರಿಗೆ ಹೋಂ ಐಸೋಲೇಷನ್ ಗೆ ಅವಕಾಶ ನೀಡುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡುವುದಿಲ್ಲ. ಅವರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿಯೇ ದಾಖಲಾಗಬೇಕು ಎಂದು ಸಚಿವ ಡಾ. ಕೆ. ಸುಧಾಕರ್ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.
ಕೋವಿಡ್ ಸೋಂಕಿತರಿಗೆ ಇನ್ನು ಮುಂದೆ ಹೋಂ ಐಸೋಲೇಷನ್ ಇರುವುದಿಲ್ಲ. ಅವರು ನೇರವಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿ ದಾಖಲಾಗಬೇಕು. ಹೀಗಾಗುವುದರಿಂದ ಸೋಂಕು ಹರಡುವುದನ್ನು ತಡೆಯಬಹುದು. ಉತ್ತಮ ಸೌಲಭ್ಯವಿರುವ ಹಾಸ್ಟೆಲ್, ಸರ್ಕಾರಿ-ಖಾಸಗಿ ಸಮುದಾಯ ಭವನಗಳನ್ನು ಗುರುತಿಸಿ, ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಬೇಕು ಎಂದು ಸೂಚಿಸಿದ್ದಾರೆ.
ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಂಡು ಬಂದಿದ್ದು ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವಂತೆ ಮಾಡಲಾಗಿದೆ. ಅಗತ್ಯವಿರುವ ಔಷಧಿ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.