ವಿಜಯಸಾಕ್ಷಿ ಸುದ್ದಿ, ನವಲಗುಂದ:
Advertisement
ಹುಬ್ಬಳ್ಳಿಯಿಂದ ಬಾಗಲಕೋಟಿಗೆ ತೆರಳುತ್ತಿದ್ದ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ಸಮೀಪದ ಬೆಣ್ಣೆಹಳ್ಳದ ಸೇತುವೆ ತಿರುವಿನಲ್ಲಿ ಸ್ಟೇರಿಂಗ್ ತುಂಡಾಗಿ ಉರುಳಿ ಬಿದ್ದು ಪರಿಣಾಮ ಹದಿನೈದು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಜರುಗಿದೆ.
ಬಸ್ ನಲ್ಲಿ ಮೂವತ್ತು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಪ್ರಯಾಣಿಕರಿಗೆ ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರವಾಗಿ ಗಾಯಗೊಂಡ ವೃದ್ಧೆಯೊಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಪಿಎಸ್ಐ ಕಲ್ಮೇಶ ಬನ್ನೂರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.