ವಿಜಯಸಾಕ್ಷಿ ಸುದ್ದಿ, ಚೆನ್ನೈ
Advertisement
ಸ್ಯಾನಿಟೈಸರ್ ಬಳಸಿ ಮದ್ಯ ತಯಾರಿಸುತ್ತಿದ್ದ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ.
ಸ್ಯಾನಿಟೈಸರ್ ಬಳಸಿ ಮದ್ಯ ತಯಾರಿಸುತ್ತಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಕಡಲೂರು ಜಿಲ್ಲೆಯ ರಾಮನಾಥನ್ ಕುಪ್ಪಮ್ ನಲ್ಲಿ ಈ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವೇಳೆ ಸ್ಯಾನಿಟೈಸರ್ ನಿಂದ ಮದ್ಯ ತಯಾರಿಸುತ್ತಿದ್ದ 6 ಜನರನ್ನು ಬಂಧಿಸಿದ್ದಾರೆ.
ತಮಿಳುನಾಡಿನಲ್ಲಿ ಲಾಕ್ ಡೌನ್ ಘೋಷಣೆಯಾಗಿರುವುದರಿಂದ ಸರ್ಕಾರದ ಮದ್ಯದ ಅಂಗಡಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಸದ್ಯ ಮೇ. 24ರ ವರಗೆ ತಮಿಳುನಾಡಿನಲ್ಲಿ ಸರ್ಕಾರ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿದೆ. ಹೀಗಾಗಿಯೇ ಮದ್ಯ ಪ್ರಿಯರು ಪರದಾಡುವಂತಾಗಿದೆ.