ಹಳ್ಳಿಗಳಿಗೆ ನುಗ್ಗಿದ ಸೋಂಕು…ಸೋಂಕು ರಹಿತ ಕಾಯಿಲೆಗಳಿಂದ ಸಾಯುತ್ತಿರುವ ಜನ!

0
Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

Advertisement

ಇಲ್ಲಿಯವರೆಗೆ ನಗರ ಪ್ರದೇಶದಲ್ಲಿ ತನ್ನ ಅಟ್ಟಹಾಸ ಮೆರೆದಿದ್ದ ಮಹಾಮಾರಿ, ಸದ್ಯ ಗ್ರಾಮೀಣ ಭಾಗಕ್ಕೆ ಎಗ್ಗಿಲ್ಲದೆ ಎಂಟ್ರಿ ಕೊಟ್ಟಿದೆ. ಆದರೆ, ಜನರು ಮಾತ್ರ ಆಸ್ಪತ್ರೆಗೆ ಹೋಗದೆ, ಸಾವು – ನೋವುಗಳನ್ನು ತಂದುಕೊಳ್ಳುತ್ತಿದ್ದಾರೆ. ಇದರೊಂದಿಗೆ ಹಳ್ಳಿಗಳಲ್ಲಿ ಚಿತ್ರ – ವಿಚಿತ್ರ ಖಾಯಿಲೆಗಳು ಕಾಣಿಸಿಕೊಳ್ಳುತ್ತಿವೆ.

ಜಿಲ್ಲೆಯ ಗೋಕಾಕ್ ಹಾಗೂ ಮೂಡಲಗಿ ತಾಲೂಕಿನಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 20 ದಿನಗಳಲ್ಲಿ ಕೋವಿಡ್ ಹಾಗೂ ಇನ್ನಿತರ ರೋಗಗಳಿಂದ ಸುಮಾರು 700ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ.

ಮೂಡಲಗಿ ತಾಲೂಕಿನ ಮುನ್ಯಾಳ, ವಡ್ಡೆರಹಟ್ಟಿ, ರಾಜಾಪುರ, ತುಕ್ಕಾನಟ್ಟಿ ಗ್ರಾಮಗಳಲ್ಲಿಯೇ ಕೇವಲ 15 ದಿನಗಳಲ್ಲಿ ಸುಮಾರು 186 ಜನರು ಸಾವನ್ನಪ್ಪಿದ್ದಾರೆ. ಸರಣಿ ಸಾವಿನಿಂದ ಜನ ಕಂಗಾಲಾಗಿದ್ದಾರೆ.

ಕೊರೊನಾ ಸೇರಿದಂತೆ ಇನ್ನಿತರ ರೋಗಗಳಿಂದ ಜನ ಬಳಲುತ್ತಿದ್ದರೂ ಆಸ್ಪತ್ರೆಗೆ ತೆರಳುತ್ತಿಲ್ಲ. ಹೀಗಾಗಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಲ್ಲದೇ, ಮನೆಯಲ್ಲಿ ಸಾವನ್ನಪ್ಪುತ್ತಿದ್ದಾರೆ. ಇಂತಹ ಘಟನೆಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯುತ್ತಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮನ್ನೇಕೋಟೆ ಗ್ರಾಮದಲ್ಲಿ 25 ದಿನಗಳಲ್ಲಿ ಸುಮಾರು 15 ಜನ ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆಯ ಕದಡಿ ಗ್ರಾಮದಲ್ಲಿ 10 ದಿನಗಳಲ್ಲಿ ಸುಮಾರು 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಇದರಿಂದಾಗಿ ರಾಜ್ಯದ ಹಳ್ಳಿಗಳಲ್ಲಿನ ಜನ ತುಂಬಾ ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here