ವಿಜಯಸಾಕ್ಷಿ ಸುದ್ದಿ, ದಾವಣಗೆರೆ
ಮಹಾಮಾರಿ ಹಳ್ಳಿ – ಹಳ್ಳಿಗೂ ಎಂಟ್ರಿ ಕೊಟ್ಟಿದೆ. ಇಲ್ಲಿಯವರೆಗೆ ನಗರ ಪ್ರದೇಶದಲ್ಲಿ ಮಾತ್ರ ತನ್ನ ಅಟ್ಟಹಾಸ ಮೆರೆಯುತ್ತಿದ್ದ ಸೋಂಕು, ಇದೀಗ ಹಳ್ಳಿ ಹೊಕ್ಕು ಬಿಟ್ಟಿದೆ. ಜಿಲ್ಲೆಯ ಒಂದೇ ಗ್ರಾಮದಲ್ಲಿ ಒಂದೇ ದಿನಕ್ಕೆ ಬರೋಬ್ಬರಿ 28 ಕೇಸ್ ಗಳು ಪತ್ತೆಯಾಗಿವೆ.
ತಾಲೂಕಿನ ಜರೀಕಟ್ಟೆ ಗ್ರಾಮದಲ್ಲಿ ಒಂದೇ ದಿನದಲ್ಲಿ 28 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಗ್ರಾಮದ 94 ಜನರ ಗಂಟಲು ದ್ರವವನ್ನು ಆರೋಗ್ಯ ಇಲಾಖೆ ಸಂಗ್ರಹಿಸಿತ್ತು. 94 ಜನರ ಪೈಕಿ 28 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಸದ್ಯ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆ ಮುಂದುವರೆದಿದೆ. ಗ್ರಾಮದಲ್ಲಿ ಪೊಲೀಸರಿಂದ ಕೊರೊನಾ ಜಾಗೃತಿ ಮೂಡಿಸಲಾಯಿತು. ಮಾಸ್ಕ್ ಹಾಗೂ ಸ್ಯಾನಿಟೇಜರ್ ವಿತರಣೆ ಮಾಡಲಾಗಿದೆ. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಹ ಹಳ್ಳಿಗಳ ಮೇಲೆ ತೀವ್ರ ನಿಗಾ ಇಟ್ಟು ಕೆಲಸ ಮಾಡುತ್ತಿದೆ. ಆದರೂ ಪ್ರಕರಣಗಳ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಸಾಗಿದೆ.