ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
Advertisement
ಇಲ್ಲಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ಲ್ಯಾಕ್ ಫಂಗಸ್ ಸೊಂಕಿತ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ.
ಈ ಮೂಲಕ ಕಿಮ್ಸ್ ನಲ್ಲಿ ಬ್ಲ್ಯಾಕ್ ಫಂಗಸ್ ಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ. ನಗರ ಮೂಲದ ವ್ಯಕ್ತಿಯೊಬ್ಬರು ಕಳೆದ ಕೆಲವು ದಿನಗಳಿಂದ ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಬ್ಲ್ಯಾಕ್ ಫಂಗಸ್ ಗೆ ಧಾರವಾಡ ಜಿಲ್ಲೆಯಲ್ಲಿ ಒಟ್ಟು 78 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಕಿಮ್ಸ್ ವೈದ್ಯರು ತಿಳಿಸಿದ್ದಾರೆ.