Home Karnataka News ಗೃಹಲಕ್ಷ್ಮಿ ಯೋಜನೆಯಲ್ಲಿ ₹250 ಕೋಟಿ ಹಗರಣ? ಸಿಬಿಐ ತನಿಖೆಗೆ ಸಿ.ಟಿ. ರವಿ ಆಗ್ರಹ!

ಗೃಹಲಕ್ಷ್ಮಿ ಯೋಜನೆಯಲ್ಲಿ ₹250 ಕೋಟಿ ಹಗರಣ? ಸಿಬಿಐ ತನಿಖೆಗೆ ಸಿ.ಟಿ. ರವಿ ಆಗ್ರಹ!

0
ಗೃಹಲಕ್ಷ್ಮಿ ಯೋಜನೆಯಲ್ಲಿ ₹250 ಕೋಟಿ ಹಗರಣ? ಸಿಬಿಐ ತನಿಖೆಗೆ ಸಿ.ಟಿ. ರವಿ ಆಗ್ರಹ!
Spread the love

ಚಿಕ್ಕಮಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಪ್ರಕರಣವನ್ನು ತಕ್ಷಣವೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಯಾವುದೇ ತನಿಖೆಯಿಂದ ಈ ಪ್ರಕರಣದಲ್ಲಿ ನ್ಯಾಯ ಸಿಗುವುದಿಲ್ಲ ಎಂದು ಆರೋಪಿಸಿದರು. ನಕಲಿ ಖಾತೆಗಳನ್ನು ಸರ್ಕಾರ ಪತ್ತೆಹಚ್ಚಿಲ್ಲ, ಬದಲಾಗಿ ಸಿಐಜಿ ಈ ವಂಚನೆಯನ್ನು ಬಯಲಿಗೆಳೆದಿದೆ. ಒಂದೇ ಬ್ಯಾಂಕ್ ಖಾತೆಗೆ ಸಾವಿರಾರು ಫಲಾನುಭವಿಗಳ ಹಣ ವರ್ಗಾವಣೆಯಾಗಿರುವುದು ಸಾಮಾನ್ಯ ವಿಷಯವಲ್ಲ ಎಂದು ಹೇಳಿದರು.

ಈ ಪ್ರಕರಣದ ಕುರಿತು ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಮೌನವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಿಂದಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ಮೌನವೂ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದರು.

ನಕಲಿ ಖಾತೆಗಳ ಮೂಲಕ ವರ್ಗಾವಣೆಯಾದ ಹಣದಲ್ಲಿ ಆಳುವವರಿಗೂ ಪಾಲು ಸಿಕ್ಕಿದೆಯೇ ಎಂಬ ಅನುಮಾನ ಮೂಡುತ್ತಿದೆ. ಗೃಹಲಕ್ಷ್ಮಿಯರ ಹೆಸರಿನಲ್ಲಿ ಸಾರ್ವಜನಿಕರ ಹಣ ಲೂಟಿ ಮಾಡಿರುವುದು ರಾಜ್ಯದ ಮಹಿಳೆಯರಿಗೆ ಮಾಡಿದ ದ್ರೋಹ ಎಂದು ಕಿಡಿಕಾರಿದರು.

ಕಾಕಾ ಪಾಟೀಲ್ ಅವರ ಪತ್ನಿ, ಶೋಭಾ ಕರಂದ್ಲಾಜೆ ಹಾಗೂ ತಮ್ಮ ಪತ್ನಿಗೂ ಗೃಹಲಕ್ಷ್ಮಿ ಯೋಜನೆಯ ಲಾಭ ದೊರೆಯುತ್ತದೆ ಎಂದು ಸರ್ಕಾರ ಭರವಸೆ ನೀಡಿತ್ತು. ಆದರೆ ಈಗ ಯೋಜನೆಯಲ್ಲೇ ಭ್ರಷ್ಟಾಚಾರದ ಆರೋಪ ಕೇಳಿಬಂದಿರುವುದು ಅತ್ಯಂತ ಗಂಭೀರ ವಿಚಾರ. ಸತ್ಯಾಸತ್ಯತೆ ಹೊರಬರಬೇಕಾದರೆ ಸಿಬಿಐ ತನಿಖೆಯೊಂದೇ ಸೂಕ್ತ ಮಾರ್ಗ ಎಂದು ಸಿ.ಟಿ. ರವಿ ಒತ್ತಾಯಿಸಿದರು.


Spread the love

LEAVE A REPLY

Please enter your comment!
Please enter your name here