ಬಿಹಾರ: ಬಿಹಾರ ವಿಧಾನಸಭಾ ಚುನಾವಣೆಗೆ ಸಿದ್ಧತೆ ಜೋರಾಗಿದೆ. ಎನ್‌ಡಿಎ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪಟ್ನಾದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಜೆ.ಪಿ. ನಡ್ಡಾ, ಮುಖ್ಯಮಂತ್ರಿ ನಿತೀಶ್ ಕುಮಾರ್, ಜಿತನ್ ರಾಮ್ ಮಾಂಜಿ, ಚಿರಾಗ್ ಪಾಸ್ವಾನ್, ಉಪೇಂದ್ರ ಕುಶ್ವಾಹ ಮತ್ತು ಇತರ ಎನ್ಡಿಎ ನಾಯಕರು ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ 2 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್ಪತಿ ದೀದಿಯನ್ನಾಗಿ ಮಾಡುತ್ತೇವೆಂದು ಭರವಸೆ ನೀಡಿದ್ದಾರೆ.
ಮಿಷನ್ ಕರೋಡಪತಿ ಯೋಜನೆಯಡಿ ಮಹಿಳಾ ಉದ್ಯಮಿಗಳಿಗೆ ಸಹಾಯ ಮಾಡಲಾಗುತ್ತದೆ, ಬಿಹಾರದ 4 ಹೊಸ ನಗರಗಳಲ್ಲಿ ಮೆಟ್ರೋ ಸೇವೆ ಆರಂಭಿಸಲಾಗುವುದು, ಬಡ ಕುಟುಂಬಗಳಿಗೆ ‘ಪಂಚಾಮೃತ ಗ್ಯಾರಂಟಿ’ ಯೋಜನೆ ಜಾರಿ ಭರವಸೆ, ಬಿಹಾರದಲ್ಲಿ 7 ಎಕ್ಸ್ಪ್ರೆಸ್ ಹೆದ್ದಾರಿಗಳನ್ನು ನಿರ್ಮಿಸುವ ಭರವಸೆ,
ಬಡ ಕುಟುಂಬಕ್ಕೆ 125 ಯೂನಿಟ್ ಉಚಿತ ವಿದ್ಯುತ್ ಭರವಸೆ, 3600 ಕಿ.ಮೀ. ರೈಲ್ವೆ ಮಾರ್ಗ ಆಧುನೀಕರಣ ಗೊಳಿಸುತ್ತೇವೆ ಎನ್ನುವ ಭರವಸೆಯನ್ನು ಜನರಿಗೆ ನೀಡಿದ್ದಾರೆ.ಬಿಹಾರ ವಿಧಾನಸಭಾ ಚುನಾವಣೆಯ ಪ್ರಚಾರ ತೀವ್ರಗೊಂಡಿದೆ. ಗುರುವಾರ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಚುನಾವಣೆ ನಡೆಯಲಿರುವ ರಾಜ್ಯದ ವಿವಿಧ ಭಾಗಗಳಲ್ಲಿ ರ್ಯಾಲಿಗಳನ್ನು ನಡೆಸಿದ್ದರು.



