ವಿಜಯಸಾಕ್ಷಿ ಸುದ್ದಿ, ಚಿಕ್ಕೋಡಿ
Advertisement
ಮುಂದಿನ 10 ದಿನಗಳಲ್ಲಿಯೇ ನನ್ನ ರಾಜಕೀಯ ಜೀವನದ ನಿರ್ಣಯ ತಿಳಿಸುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದ ಕುರಿತು ಹಿರಿಯರು ಖಾರವಾಗಿ ಹೇಳಿದ್ದಾರೆ. ಹೀಗಾಗಿ ನಾನು ಸದ್ಯ ಯಾವುದೇ ಹೇಳಿಕೆ ನೀಡುವದಿಲ್ಲ. ನನ್ನ ಹೇಳಿಕೆಯ ಹಿಂದೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.
ಸುತ್ತೂರು ಶ್ರೀಗಳ ತಾಯಿ ಸಾವನ್ನಪ್ಪಿದ ಕಾರಣ ಸಾಂತ್ವನ ಹೇಳಲು ಸುತ್ತೂರು ಮಠಕ್ಕೆ ಹೋಗಿದ್ದೆ. ಯಾವುದೇ ರಾಜಕೀಯ ವಿಷಯದ ಕುರಿತು ನಾನು ಹೋಗಿರಲಿಲ್ಲ. ಕೋವಿಡ್ ನಿಂದ ಮೃತಪಟ್ಟ ಆಪ್ತರ ಮನೆಗೆ ಇಂದು ಭೇಟಿ ನೀಡಿದ್ದೇನೆ. ಈ ಸಂದರ್ಭದಲ್ಲಿ ಅವರ ಆಪ್ತ ಶಾಸಕ ಮಹೇಶ ಕುಮಟಳ್ಳಿ ಸೇರಿದಂತೆ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.