ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದವರಿಗೆ ದಲಿತರಿಗೆ ದ್ರೋಹ ಮಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ನ್ಯಾಯಲಯಕ್ಕೆ ಅಲೆಯುತ್ತಿದ್ದಾರೆ. ಸಚಿವ ಸಂಪುಟದ ಪಾವಿತ್ರ್ಯತೆ ಹಾಳು ಮಾಡುತ್ತಿದ್ದಾರೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ ವಿರುದ್ಧವಾಗಿ ತೀರ್ಪು ಬರಲಿದೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್ ಜೈಲಿಗೆ ಹೋಗುತ್ತಾರೆ.
Advertisement
ಇದರಲ್ಲಿ ಯಾವುದೇ ಅನುಮಾನ ಬೇಡ. ಇದರಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪು ಚುಕ್ಕೆ. ಡಿಕೆ ಶಿವಕುಮಾರ್ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡರು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದರು.