ದುಬೈನಲ್ಲಿ ನಡೆದ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯ 29ನೇ ಪಂದ್ಯದಲ್ಲಿ ಅಬುಧಾಬಿ ನೈಟ್ ರೈಡರ್ಸ್ ವಿರುದ್ಧ ದುಬೈ ಕ್ಯಾಪಿಟಲ್ಸ್ ತಂಡವು 26 ರನ್ಗಳ ಜಯ ಸಾಧಿಸಿದೆ.
ಪಂದ್ಯದಲ್ಲಿ ದುಬೈ ಕ್ಯಾಪಿಟಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ 39 ವರ್ಷದ ಡೇವಿಡ್ ವಾರ್ನರ್ 57 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ ಅಜೇಯ 93 ರನ್ ಚಚ್ಚಿದ್ದಾರೆ.
ಈ 93 ರನ್ಗಳೊಂದಿಗೆ ಡೇವಿಡ್ ವಾರ್ನರ್ ಟಿ20 ರನ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ರನ್ ಮಷಿನ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ರನ್ ಸರದಾರರ ಟಾಪ್-5 ಪಟ್ಟಿಯಲ್ಲಿ ಈ ಹಿಂದೆ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು ಎನ್ನಲಾಗಿದೆ.
2007 ರಿಂದ 2024 ರವರೆಗೆ 382 ಟಿ20 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 9 ಭರ್ಜರಿ ಶತಕ ಹಾಗೂ 97 ಅರ್ಧಶತಕಗಳೊಂದಿಗೆ ಒಟ್ಟು 12886 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಹಾಗೂ ವಿಶ್ವದ 5ನೇ ಬ್ಯಾಟರ್ ಎನಿಸಿಕೊಂಡಿದ್ದರು.
ಇದೀಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಡೇವಿಡ್ ವಾರ್ನರ್ ಐದನೇ ಸ್ಥಾನಕ್ಕೇರಿದ್ದಾರೆ.