12 ವರ್ಷಗಳ ಪ್ರೀತಿ: ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ ಚೈತ್ರಾ ಕುಂದಾಪುರ!

0
Spread the love

ಮಾಜಿ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ಹಸೆಮಣೆ ಏರಿದ್ದಾರೆ. ಕಳೆದ ಕೆಲವು ದಿನಗಳಿಂದ ಮದುವೆಗೆ ತಯಾರಿ ನಡೆದಿದ್ದು, ಇದೀಗ ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ್ದಾರೆ. ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಸಮ್ಮತಿಯೊಂದಿಗೆ ಪ್ರೀತಿಸಿದ ಹುಡುಗನೊಂದಿಗೆ ಸರಳ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.

Advertisement

ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್, ಗೋಲ್ಡ್ ಸುರೇಶ್ ಭಾಗಿಯಾಗಿ ನವದಂಪತಿಗೆ ಶುಭಹಾರೈಸಿದ್ದಾರೆ.

ಕಾಲೇಜಿನಲ್ಲಿ ಓದುತ್ತಿದ್ದಾಗ ಚೈತ್ರಾಗೆ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಜಗಳದಿಂದ ಶುರುವಾದ ಸ್ನೇಹ ಈಗ ಮದುವೆಗೆ ಮುನ್ನುಡಿ ಬರೆದಿದೆ. ಆ್ಯನಿಮೇಷನ್ ಕೋರ್ಸ್ ಮಾಡಿರುವ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ.

 


Spread the love

LEAVE A REPLY

Please enter your comment!
Please enter your name here