ಬೆಂಗಳೂರು: ಬೋವಿ ನಿಗಮದಲ್ಲಿ 120 ಕೋಟಿ ಹಗರಣ ಆಗಿದೆ. ಅದರ ಬಗ್ಗೆ ಇ.ಡಿ ಯಾಕೆ ಕಾಳಜಿ ವಹಿಸಿಲ್ಲ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ, ಡಿಸಿಎಂ ಹೆಸರು ಹೇಳಿ ಎಂದು ಒತ್ತಡ ಹಾಕಲಾಗುತ್ತಿದೆ. ಹಣ ಬಳ್ಳಾರಿ ಚುನಾವಣೆಗೆ ಬಳಕೆಯಾಗಿದೆ ಅಂತಾ ಹೇಳಲು ಒತ್ತಡ ಹಾಕಲಾಗುತ್ತಿದೆ ಎಂದು ದೂರಿದ್ದಾರೆ.
Advertisement
ಬೋವಿ ನಿಗಮದಲ್ಲಿ 120 ಕೋಟಿ ಹಗರಣ ಆಗಿದೆ. ಅದರ ಬಗ್ಗೆ ಇ.ಡಿ ಯಾಕೆ ಕಾಳಜಿ ವಹಿಸಿಲ್ಲ? ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣದಲ್ಲಿ ಇ.ಡಿ ಯಾಕೆ ಗಮನ ಹರಿಸಿಲ್ಲ. ಕೆಐಎಡಿಬಿ ದುಡ್ಡು ಸೇಲಂಗೆ ಹೋಗಿದೆ. ಇದರ ಬಗ್ಗೆ ಯಾಕೆ ಇ.ಡಿ ಆಸಕ್ತಿ ವಹಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.