ಬಿಹಾರ: ಬಿಹಾರದಲ್ಲಿ ಅಧಿಕಾರದಲ್ಲಿರುವ ನಿತೀಶ್ ಕುಮಾರ್ ಸರ್ಕಾರವು ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರವನ್ನು ಉಳಿಸಿಕೊಳ್ಳುವ ಆಶಯವನ್ನು ಹೊಂದಿದ್ದು, ರಾಜ್ಯದ ಜನರಿಗೆ ಉಚಿತ ವಿದ್ಯುತ್ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,
ನಮ್ಮ ರಾಜ್ಯದಲ್ಲಿ ನಾವು ಆರಂಭದಿಂದಲೂ ಕಡಿಮೆ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ. ಆದರೆ ಇದೀಗ ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ರಾಜ್ಯದ ಜನರಿಗೆ 125 ಯೂನಿಟ್‌ವರೆಗೂ ಗೃಹಬಳಕೆ ಉಚಿತ ವಿದ್ಯುತ್ ನೀಡಲಾಗುವುದು. ಗ್ರಾಹಕರು 125 ಯೂನಿಟ್‌ವರೆಗೂ ಯಾವುದೇ ಹಣ ಪಾವತಿಸಬೇಕಿಲ್ಲ ಎಂದು ತಿಳಿಸಿದ್ದಾರೆ.
ಉಚಿತ ವಿದ್ಯುತ್ ಯೋಜನೆಯ ಮೂಲಕ ರಾಜ್ಯದ 1.67 ಕೋಟಿ ಕುಟುಂಬಗಳು ಪ್ರಯೋಜನ ಪಡೆಯಲಿದ್ದು, ಮುಂದಿನ ಮೂರು ವರ್ಷಗಳವರೆಗೆ ಈ ಯೋಜನೆ ಜಾರಿಯಲ್ಲಿರುತ್ತದೆ ಎಂದಿದ್ದಾರೆ. ಈಗಾಗಲೇ ಸರ್ಕಾರಿ ಉದ್ಯೋಗಗಳು ಮತ್ತು ಪಿಂಚಣಿಗಳಲ್ಲಿ ಮಹಿಳೆಯರಿಗೆ ಶೇಕಡಾ 35 ರಷ್ಟು ಮೀಸಲಾತಿಯಂತಹ ಪ್ರಮುಖ ಭರವಸೆಗಳನ್ನು ಘೋಷಿಸಲಾಗಿದೆ ಎಂದು ತಿಳಿದಿದೆ.



