ಸ್ನೇಹಮಯಿ ಕೃಷ್ಣ, ಗಂಗರಾಜುಗೆ ಬಲ ತುಂಬಲು ವಾಮಾಚಾರ! 13 ಮಂದಿ ಅರೆಸ್ಟ್

0
Spread the love

ಮಂಗಳೂರು: ಮೂಡಾ ಹಗರಣ ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿದ್ದು, ವಿಪಕ್ಷಗಳ ಬಾಯಿಗೂ ಎಲೆ ಅಡಿಕೆಯಾಗಿಬಿಟ್ಟಿದೆ. ಮತ್ತೊಂದೆಡೆ ಕಾಂಗ್ರೆಸ್​ ನಲ್ಲಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳು ಕನಸು ಕಾಣೋಕೆ ಶುರುವಿಟ್ಟುಕೊಂಡಿದ್ದಾರೆ. ಇದರ ಬೆನ್ನಲ್ಲೇ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹಾಗೂ ಗಂಗರಾಜು ಅವರ ಫೋಟೋಗಳಿಗೆ ರಕ್ತಾಭಿಷೇಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Advertisement

ಹೌದು ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್​ನಲ್ಲಿ ಪ್ರಾಣಿ ಬಲಿಯ ವಿಡಿಯೋಗಳು ಪತ್ತೆಯಾಗಿವೆ. ಸರಣಿ ಪ್ರಾಣಿ ಬಲಿ ಮಾಡಿರುವ ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜುಗೆ  ಶಕ್ತಿ ತುಂಬಲು ಈ ರೀತಿ ಮಾಡುತ್ತಿದ್ದರು ಎನ್ನಲಾಗಿದೆ.

ಈ ವಿಚಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪೊಲೀಸ್​ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಣತಿಯಂತೆ ಕದ್ರಿ ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್ ದೂರು ನೀಡಿದ್ದು, ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಮದ್ಯರಾತ್ರಿ 1.30ಕ್ಕೆ ಎಫ್​ಐಆರ್​ ದಾಖಲಾಗಿದೆ. ಅದಲ್ಲದೆ ಈ ಕೇಸ್‌ಗೆ ಸಂಬಂಧಿಸಿದಂತೆ, ಪ್ರಸಾದ್ ಅತ್ತಾವರ ಹಾಗೂ 13 ಜನರನ್ನು ಬಂಧಿಸಲಾಗಿದೆ.


Spread the love

LEAVE A REPLY

Please enter your comment!
Please enter your name here