ಆಟದ ಗನ್ ಎಂದು ತಮ್ಮನ ಮೇಲೆ ಫೈರಿಂಗ್ ಮಾಡಿದ 13ರ ಬಾಲಕ: 3 ವರ್ಷದ ಕಂದ ದುರ್ಮರಣ!

0
Spread the love

ಮಂಡ್ಯ:- ಆಘಾತಕಾರಿ ಘಟನೆಯೊಂದು ಸಕ್ಕರೆನಾಡು ಮಂಡ್ಯದಲ್ಲಿ ನಡೆದಿದೆ. 13 ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ್ದು, ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿ ಪ್ರಾಣಬಿಟ್ಟಿದೆ.

Advertisement

ಈ ಘಟನೆ ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಜರುಗಿದೆ.

ಕೋಳಿ ಫಾರಂನಲ್ಲಿ ಭದ್ರತೆಗಾಗಿ ಒಂದು ಅಸಲಿ ಗನ್‌ ಇಡಲಾಗಿತ್ತು. ಅದು ಸಜೀವ ಗುಂಡುಗಳಿಂದ ಲೋಡೆಡ್ ಆಗಿತ್ತು. ಪಶ್ಚಿಮ ಬಂಗಾಳ ಮೂಲದ ಶಶಾಂಕ್ ಹಾಗೂ ಲಿಪಿಕ ದಂಪತಿ ಇಲ್ಲೇ ಕೂಲಿ ಕಾರ್ಮಿಕರಾಗಿದ್ದು, 13 ವರ್ಷದ ಬಾಲಕ ಸುದೀಪ್‌ ದಾಸ್‌ನೊಂದಿಗೆ 3 ವರ್ಷದ ಮಗುವನ್ನು ಆಟವಾಡಲು ಬಿಟ್ಟು ಕೆಲಸಕ್ಕೆ ಹೋಗಿದ್ದರು.

ಈ ವೇಳೆ ಬಾಲಕ ಸುದೀಪ್, ಮೇಲೆ ಇದ್ದ ಗನ್ ತೆಗೆದುಕೊಂಡು ಕಳ್ಳ-ಪೊಲೀಸ್ ಆಟ ಆಡೋಣ ಎನ್ನುತ್ತಾ 3 ವರ್ಷದ ಮಗುವಿನ ಮೇಲೆ ಶೂಟ್ ಮಾಡಿದ್ದಾನೆ. ಈ ಆಕಸ್ಮಿಕ ಫೈರಿಂಗ್‌ ಮಗುವಿನ ಹೊಟ್ಟೆ ಸೀಳಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಮಗು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.


Spread the love

LEAVE A REPLY

Please enter your comment!
Please enter your name here