ಬೆಂಗಳೂರು: ಎಲ್ಲಾ ಕಂಪನಿಗಳಿಗೆ 14 ಗಂಟೆ ಕೆಲಸದ ಅವಧಿ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, 14 ಗಂಟೆ ಕೆಲಸದ ಅವಧಿ ಹೆಚ್ಚಳ ಮಾಡುವ ಪ್ರಸ್ತಾಪ ಎಲ್ಲಾ ಕಂಪನಿಗಳಿಗೆ ಅನ್ವಯ ಆಗುವುದಿಲ್ಲ.
ಎಲ್ಲಾ ಕಂಪನಿಗಳಿಗೆ ಅನ್ವಯ ಆಗುತ್ತದೆ ಅಂತಾ ಸುದ್ದಿ ಹರಡಲಾಗುತ್ತಿದೆ. ಆದರೆ ಲಿಮಿಟ್ ಆಗಿರೊ ಕಂಪನಿಗಳಿಗೆ ಮಾತ್ರ ಇದು ಅನ್ವಯ ಆಗುತ್ತದೆ ಎಂದು ಹೇಳಿದರು. ಯಾವ ಕಂಪನಿಗಳು 14 ಗಂಟೆ ಕೆಲಸದ ಅವಧಿಗೆ ಮನವಿ ಸಲ್ಲಿಕೆ ಮಾಡಿರುತ್ತದೆಯೋ ಅವರಿಗೆ ಮಾತ್ರ ಈ ಬಗ್ಗೆ ಅನುಮತಿ ನೀಡಲಾಗುತ್ತದೆ. ಎಲ್ಲಾ ಕಂಪನಿಗಳಿಗೆ ಇದು ಅನ್ವಯ ಆಗುತ್ತೆ ಅನ್ನೋದು ಸುಳ್ಳು ಎಂದು ಸ್ಪಷ್ಟನೆ ನೀಡಿದರು.



