ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಪಟ್ಟಣದ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಆದಾಲತ್‌ನಲ್ಲಿ ಒಟ್ಟು 1830 ಪ್ರಕರಣಗಳ ಪೈಕಿ 1474 ಪ್ರಕರಣಗಳನ್ನು ಉಭಯ ನ್ಯಾಯಾಧೀಶರಾದ ಆರ್.ಉಷಾರಾಣಿ ಮತ್ತು ಎಸ್.ಪಿ. ಮನುಶರ್ಮ ನೇತೃತ್ವದಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ರಸ್ತೆ ಅಪಘಾತ, ಚೆಕ್ ಬೌನ್ಸ್, ಬ್ಯಾಂಕ್ ಸಾಲ ವಸೂಲಿ, ಜಮೀನು ವಿವಾದ, ಕೌಟುಂಬಿಕ ದೌರ್ಜನ್ಯ, ಕ್ರಿಮಿನಲ್ ಪ್ರಕರಣ, ಮೋಟಾರು ವಾಹನ, ಸಹಕಾರಿ ಬ್ಯಾಂಕುಗಳು, ನಿವೇಶನ ಮಾರಾಟ ಸೇರಿದಂತೆ ಬಾಕಿ ಇದ್ದ ಇನ್ನಿತರ ಪ್ರಕರಣಗಳನ್ನು ಲೋಕ್ ಆದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಒಟ್ಟು 840 ಪ್ರಕರಣಗಳ ಪೈಕಿ 670 ಪ್ರಕಣಗಳನ್ನು ರಾಜೀ ಸಂಧಾನ ಮೂಲಕ ಇತ್ಯರ್ಥ ಪಡಿಸಿದರೆ, ಕೆಲವನ್ನು ಪರಿಹಾರದ ರೂಪದಲ್ಲಿ ಇತ್ಯರ್ಥಪಡಿಸಲಾಯಿತು. ಕಿರಿಯ ಸಿವಿಲ್ ನ್ಯಾಯಾಲಯದಲ್ಲಿ 990 ಪ್ರಕರಣಗಳ ಪೈಕಿ 804 ಪ್ರಕಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡರೆ ಇನ್ನು ಕೆಲವು ಪರಿಹಾರದ ರೂಪದಲ್ಲಿ ಇತ್ಯರ್ಥಗೊಂಡವು.
ವಕೀಲರ ಸಂಘದ ಅಧ್ಯಕ್ಷ ಟಿ. ವೆಂಕಟೇಶ್, ಉಪಾಧ್ಯಕ್ಷ ಮಂಜುನಾಥ್ ಎಸ್.ಬಾಗಳಿ, ಕಾರ್ಯದರ್ಶಿ ಎಂ. ಮಲ್ಲಪ್ಪ, ಕೆ. ಸಣ್ಣನಿಂಗನಗೌಡ, ಸರ್ಕಾರಿ ಅಭಿಯೋಜಕಿ ಮೀನಾಕ್ಷಿ ಎನ್, ನಿರ್ಮಲ, ಹಿರಿಯ ವಕೀಲರಾದ ಕೃಷ್ಣಮೂರ್ತಿ, ಮತ್ತಿಹಳ್ಳಿ ಅಜ್ಜಣ್ಣ, ರಾಮ್‌ಭಟ್, ಎಸ್. ರುದ್ರಮನಿ, ಬಿ. ಗೋಣಿಬಸಪ್ಪ, ಬಿ. ಹಾಲೇಶ್, ಕೆ.ಎಂ. ಚಂದ್ರಮೌಳಿ, ಆನಂದ ಬಂಡ್ರಿ, ಎಸ್.ಜಿ. ತಿಪ್ಪೇಸ್ವಾಮಿ,ಸೇರಿದಂತೆ ನ್ಯಾಯಾಲಯದ ಸಿಬ್ಬಂದಿಗಳಿದ್ದರು.