ಹಾಸನ:-ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು 15 ಜನರು ಅಸ್ವಸ್ಥರಾದ ಘಟನೆ ಹಾಸನದ ಕೋರ್ಲಗದ್ದೆ ಗ್ರಾಮದಲ್ಲಿ ಜರುಗಿದೆ.
Advertisement
ಘಟನೆಯಲ್ಲಿ ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಉಳಿದ ಹದಿನೈದು ಮಂದಿಯನ್ನೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ ಅವಘಡ ಸಂಭವಿಸಿದೆ.
ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಸೇರಿ ಹದಿನೈದು ಮಂದಿಗೆ ಗಾಯವಾಗಿದ್ದು, ಲತಾ (35) ಎಂಬುವವರ ಸ್ಥಿತಿ ಗಂಭೀರ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.