ಮುಸ್ಲಿಮರಿಗೆ ಶೇ. 15 ಮೀಸಲು: ನಾವು ಕೇಂದ್ರದ ಮಾದರಿ ಅನುಸರಿಸಿದ್ದೇವೆ ಎಂದ ವಸತಿ ಸಚಿವ ಜಮೀರ್!

0
Spread the love

ಬೆಂಗಳೂರು:- ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳ ಮಾಡಿರುವ ಕುರಿತಂತೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜಮೀರ್, ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು ಎಂದರು.

Advertisement

ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ.15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ ಎಂದು ತಿಳಿಸಿದ್ದಾರೆ. 2019 ರಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು.ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ.10 ರಷ್ಟು ಮೀಸಲಾತಿ ಪ್ರಮಾಣ ಶೇ. 15 ಕ್ಕೆ ಹೆಚ್ಚಿಸಲಾಗಿದೆ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here