ಗಾಂಧೀಜಿಯವರ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಿ

0
155th Birth Anniversary Program of Father of the Nation Mahatma Gandhi
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಗತ್ತು ಕಂಡ ಮಹಾನ್ ನಾಯಕರಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ ಶಾಸ್ತ್ರೀಜಿಯವರು ದೇಶಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅಭಿಪ್ರಯಪಟ್ಟರು.

Advertisement

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜಿಲ್ಲಾಡಳಿತ ಭವನದಲ್ಲಿ ಜರುಗಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶ್ರಮ ಇಲ್ಲದ ಸಂಪತ್ತು, ಪ್ರಜ್ಞೆ ಇಲ್ಲದ ಸಂತೋಷ, ತತ್ವವಿಲ್ಲದ ರಾಜಕೀಯ, ಬುಡ ಇಲ್ಲದ ಶಿಕ್ಷಣ, ನೀತಿ ಇಲ್ಲದ ವ್ಯಾಪಾರ ಮಾನವೀಯತೆ ಇಲ್ಲದ ವಿಜ್ಞಾನ, ತ್ಯಾಗ ಇಲ್ಲದ ಪೂಜೆ ಇವೆಲ್ಲವೂ ನಿರರ್ಥಕ. ಗಾಂಧೀಜಿಯವರ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯತೆ ಇದೆ ಎಂದು ಸಲಹೆ ನೀಡಿದರು.

ಮಾಜಿ ಪ್ರಧಾನಿ ಲಾಲ್‌ಬಹದ್ದೂರ ಶಾಸ್ತ್ರೀಯವರು ಸರಳ ಜೀವಿಗಳು. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನು ಸಮರ್ಪಿಸಿಕೊಂಡವರು. ಜೈ ಜವಾನ್ ಜೈ ಕಿಸಾನ್ ಎನ್ನುವ ಸಂದೇಶದಿಂದ ದೇಶಕ್ಕೆ ಸೈನಿಕರ ಮತ್ತು ರೈತರ ಮಹತ್ವ ಬಹಳಷ್ಟಿದೆ ಎಂದು ಸಾರಿದರು. ಈಗಿನ ವಿದ್ಯಾರ್ಥಿಗಳು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ ಶಾಸ್ತ್ರೀ ಕುರಿತು ಅಧ್ಯಯನ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

155th Birth Anniversary Program of Father of the Nation Mahatma Gandhi

ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಸ್ವಚ್ಛತೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಸುಮನ್ ಕುಲಕರ್ಣಿ-ಭಗವದ್ಗೀತೆ, ಕುಮಾರಿ ವೈನಾ ಮಕಾನದಾರ–ಕುರಾನ್, ಅಲ್ವಿದಾ ದಲಭಂಜನ-ಬೈಬಲ್ ಪಠಿಸುವುದರ ಮೂಲಕ ಸರ್ವಧರ್ಮ ಪ್ರಾರ್ಥನೆ ಪ್ರಸ್ತುತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮಹೇಶ ಪೋತದಾರ, ತಹಸೀಲ್ದಾರರಾದ ಶ್ರೀನಿವಾಸ ಕುಲಕರ್ಣಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಗುಂಜೀಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.

ವೆಂಕಟೇಶ ಅಲ್ಕೋಡ ಗಾಂಧೀಜಿಯ ಪ್ರಿಯ ಭಜನೆಗಳನ್ನು ಪ್ರಸ್ತುತಪಡಿಸಿದರು. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಮಹಾತ್ಮ ಗಾಂಧೀಜಿಯವರು ಸತ್ಯ, ಅಹಿಂಸೆ ಹಾಗೂ ಪ್ರೇಮ ಎಂಬ ಮೂರು ಅಸ್ತçಗಳಿಂದ ಹೋರಾಡಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ತಮ್ಮ ಇಡೀ ಜೀವನವನ್ನು ದೇಶದ ಸ್ವಾತಂತ್ರ್ಯಕ್ಕಾಗಿ ಹಾಗೂ ಸಮಾಜದ ಅಭಿವೃದ್ಧಿಗಾಗಿ ಮುಡಿಪಿಟ್ಟ ಮಹಾತ್ಮರು. ಯಾವುದೇ ಆಸೆ-ಆಕಾಂಕ್ಷೆಗಳನ್ನು ಹೊಂದದೇ ತಮ್ಮನ್ನು ತಾವು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡರು. ಸ್ವಾತಂತ್ರ್ಯನಂತರ ಈ ದೇಶವನ್ನು ಸುಂದರ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸಿದರು.
– ಎಸ್.ವಿ. ಸಂಕನೂರು.
ವಿಧಾನ ಪರಿಷತ್ ಸದಸ್ಯರು.

ಉಪನ್ಯಾಸಕರಾಗಿ ಆಗಮಿಸಿದ ಸಾಹಿತಿ ಐ.ಕೆ. ಕಮ್ಮಾರ ಮಾತನಾಡಿ, ಮಹಾತ್ಮ ಗಾಂಧೀಜಿ ಹಾಗೂ ಲಾಲ್‌ಬಹದ್ದೂರ ಶಾಸ್ತ್ರೀಯವರ ಜೀವನಕ್ಕೂ ಹಾಗೂ ಜನಸಾಮಾನ್ಯರ ವಾಸ್ತವ ಜೀವನಕ್ಕೂ ಅವಲೋಕನ ಮಾಡಬೇಕಾದ ಅಗತ್ಯತೆ ಇದೆ. ಮನುಷ್ಯನ ವಿಚಾರಧಾರೆಗೂ ನಿಲುಕಲಾರದ ಅನೇಕ ಸಾಧನೆಗಳನ್ನು ಈ ಮಹಾನ್ ವ್ಯಕ್ತಿಗಳು ಮಾಡಿದ್ದಾರೆ. ಬ್ರಿಟೀಷರ ಸಂಕೋಲೆಯಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಅನೇಕರ ತ್ಯಾಗ, ಬಲಿದಾನದಿಂದ ದೊರಕಿದ ಸ್ವಾತಂತ್ರ್ಯವನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಈಗಿನ ಯುವಕರು ಅರ್ಥಪೂರ್ಣ ಜೀವನಶೈಲಿ ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ನಮ್ಮ ದೇಶದ ಋಣ ತೀರಿಸಿದಂತಾಗುತ್ತದೆ ಎಂದರು.


Spread the love

LEAVE A REPLY

Please enter your comment!
Please enter your name here