ವಿಜಯಸಾಕ್ಷಿ ಸುದ್ದಿ, ಗದಗ
17ನೇ ರಾಷ್ಟ್ರೀಯ ಸಿನಿಯರ್, ಜ್ಯೂನಿಯರ್ ಹಾಗೂ ಸಬ್ ಜ್ಯೂನಿಯರ್ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್‍ಶಿಪ್ ಕ್ರೀಡಾಕೂಟವು ಇಂದಿನಿಂದ ಫೆ.೨೧ ರವರೆಗೆ ಗದಗ ತಾಲೂಕಿನ ಬಿಂಕದಕಟ್ಟಿಯ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ನಡೆಯುತ್ತಿವೆ.
ಈ ಹಿನ್ನೆಲೆಯಲ್ಲಿ ಇಂದು ನಗರದ ಕೆ.ಎಚ್. ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೈಕಲ್ ಜಾಥಾಗೆ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರು ಸೈಕಲ್ ಜಾಥಾಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಸೈಕಲ್ ಜಾಥಾದಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಪಂ ಸಿಇಒ ಭರತ್ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಡಿಎಫ್ಒ ಸೂರ್ಯಸೇನ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ.ಬಿ.ವಿಶ್ವನಾಥ್, ಸೈಕ್ಲಿಂಗ್ ತರಬೇತುದಾರ ಅನಂತ ದೇಸಾಯಿ ಸೇರಿದಂತೆ ನೂರಾರು ಸೈಕ್ಲಿಸ್ಟ್ ಗಳು ಭಾಗಿಯಾಗಿದ್ದರು.
ಜಿಲ್ಲಾ ಕ್ರೀಡಾಂಗಣದಿಂದ ಅಸುಂಡಿ ಗ್ರಾಮದ ಕುವೆಂಪು ಶಾಲೆಯವರೆಗೆ ಸೈಕಲ್ ಜಾಥಾ ನಡೆಯಿತು.