ರಾಮನಗರ:- ಹೃದಯಾಘಾತದಿಂದ 18 ವರ್ಷದ ಅಯ್ಯಪ್ಪನ ಭಕ್ತ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಜರುಗಿದೆ. ಪ್ರಜ್ವಲ್ (18) ಮೃತ ಯುವಕ. ಕಳೆದ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ಪ್ರಜ್ವಲ್ ವಾಸವಾಗಿದ್ದ.
ಕಳೆದ ಎರಡು ದಿನಗಳ ಹಿಂದೆ ತಂದೆ ಹಾಗೂ ಸ್ನೇಹಿತರ ಜೊತೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ. ಅಯ್ಯಪ್ಪನ ದರ್ಶನ ಮುಗಿಸಿ, ಬೆಟ್ಟ ಇಳಿಯುವಾಗ ಪ್ರಜ್ವಲ್‌ಗೆ ಹೃದಯಾಘಾತವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಯಿತು. ಆದರೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಶಬರಿಮಲೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.



