HomeCrime Newsತ್ರಿಕೋನ ಪ್ರೇಮಕ್ಕೆ 18 ವರ್ಷದ ಯುವಕ ಬಲಿ! ನಾಟಕ ನೋಡಲು ಹೋದವನ ದುರಂತ ಅಂತ್ಯ

ತ್ರಿಕೋನ ಪ್ರೇಮಕ್ಕೆ 18 ವರ್ಷದ ಯುವಕ ಬಲಿ! ನಾಟಕ ನೋಡಲು ಹೋದವನ ದುರಂತ ಅಂತ್ಯ

For Dai;y Updates Join Our whatsapp Group

Spread the love

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ವ್ಯಾಪ್ತಿಯ ಗಿರಿಸಾಗರ ಗ್ರಾಮದಲ್ಲಿ ನಡೆದ ನಿಗೂಢ ನಾಪತ್ತೆ ಪ್ರಕರಣವು ಇದೀಗ ಭೀಕರ ಕೊಲೆ ಪ್ರಕರಣವಾಗಿ ಬೆಳಕಿಗೆ ಬಂದಿದೆ.

18 ವರ್ಷದ ಯುವಕ ವಿಕಾಸ್ ದಳವಾಯಿ ಹತ್ಯೆಯಾಗಿರುವುದು ದೃಢಪಟ್ಟಿದ್ದು, ಪ್ರೇಮ ಸಂಬಂಧದ ತ್ರಿಕೋನವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 20ರಂದು ಓಂಕಾರೇಶ್ವರ ದೇವಿ ಜಾತ್ರೆ ಸಂದರ್ಭದಲ್ಲಿ ಗ್ರಾಮದಲ್ಲಿ ನಡೆದ ನಾಟಕ ವೀಕ್ಷಿಸಲು ಹೋಗಿದ್ದ ವಿಕಾಸ್ ದಳವಾಯಿ ಮನೆಗೆ ಮರಳದೆ ನಾಪತ್ತೆಯಾಗಿದ್ದ. ಬಳಿಕ ಕುಟುಂಬಸ್ಥರು ಬೀಳಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ಆರಂಭದಲ್ಲಿ ಸುಳಿವು ಸಿಗದೇ ಇದ್ದರೂ, ನಂತರದ ವಿಚಾರಣೆಯಲ್ಲಿ ಪ್ರಕರಣಕ್ಕೆ ಭೀಕರ ತಿರುವು ಸಿಕ್ಕಿದೆ.

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಯುವತಿಯನ್ನೇ ಕೇಂದ್ರವಾಗಿಸಿಕೊಂಡ ತ್ರಿಕೋನ ಪ್ರೇಮಕಥೆಯಲ್ಲಿ ಮತ್ತೊಬ್ಬ ಪ್ರೇಮಿ ಕೃಷ್ಣಾ ಹಾಗೂ ಆಕೆಯ ಸಹೋದರ ರಾಜು ಸೇರಿಕೊಂಡು ವಿಕಾಸ್‌ನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ನಂತರ ಸಾಕ್ಷ್ಯ ನಾಶಪಡಿಸಲು ಶವವನ್ನು ಗೋಣಿ ಚೀಲದಲ್ಲಿ ತುಂಬಿ, ಕಲ್ಲುಗಳನ್ನು ಕಟ್ಟಿಹಾಕಿ ಘಟಪ್ರಭಾ ನದಿಗೆ ಎಸೆದಿರುವುದು ತಿಳಿದುಬಂದಿದೆ.

ನಾಪತ್ತೆ ಪ್ರಕರಣದ ತನಿಖೆ ಮುಂದುವರಿದಂತೆ ಶಂಕೆಯ ಆಧಾರದ ಮೇಲೆ ರಾಜುವಿನ ಸಹೋದರ ರವಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ ಎಂದು ತಿಳಿದುಬಂದಿದೆ.

ಈಗ ಪ್ರಮುಖ ಆರೋಪಿಗಳಾದ ಕೃಷ್ಣಾ ಮತ್ತು ರಾಜು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಮೃತ ಯುವಕನ ಕುಟುಂಬದಲ್ಲಿ ಆಕ್ರಂದನ ಮಡುಗಟ್ಟಿದ್ದು, ಗ್ರಾಮದಲ್ಲಿ ಶೋಕವಾತಾವರಣ ನಿರ್ಮಾಣವಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!