19 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ!

0
Spread the love

ಹಾಸನ:- 19 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ಜರುಗಿದೆ. ಮೃತ ಯುವಕನನ್ನು ನಿಶಾಂತ್ ಎಂದು ಗುರುತಿಸಲಾಗಿದೆ.

Advertisement

ಹೊಳೆನರಸೀಪುರ ಪಟ್ಟಣದ ಚನ್ನಕೇಶವ ಹಾಗೂ ಜ್ಯೋತಿ ದಂಪತಿ ಪುತ್ರ ನಿಶಾಂತ್ ಡಿಪ್ಲೋಮಾ ಮುಗಿಸಿ ಕೈಗಾರಿಕಾ ತರಬೇತಿ ಸಲುವಾಗಿ 15 ದಿನದ ಹಿಂದೆ ಬೆಂಗಳೂರಿಗೆ ತೆರಳಿದ್ದರು.

ಇಂದು ರೂಂನಲ್ಲಿದ್ದಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತದೇಹವನ್ನು ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ರವಾನೆ ಮಾಡಲಾಗುತ್ತದೆ.


Spread the love

LEAVE A REPLY

Please enter your comment!
Please enter your name here