HomeIndia News1984 ರ ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ

1984 ರ ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ

For Dai;y Updates Join Our whatsapp Group

Spread the love

ನವದೆಹಲಿ:1984ರ ಸಿಖ್‌ ವಿರೋಧಿ ದಂಗೆಯ ದಿಲ್ಲಿಯ ಸುಲ್ತಾನಪುರಿ ಪ್ರದೇಶದಲ್ಲಿ ನಡೆದ ಘಟನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ಸಜ್ಜನ್‌ ಕುಮಾರ್‌ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಇಂದು ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 18ಕ್ಕೆ ಕಾಯ್ದಿರಿಸಲಾಗಿದೆ.

ತೀರ್ಪು ಪ್ರಕಟಿಸುವ ಮುನ್ನ ಸಜ್ಜನ್ ಕುಮಾರ್ ಅವರನ್ನು ತಿಹಾರ್ ಜೈಲಿನಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬೃಹತ್ ಗುಂಪನ್ನು ಸಜ್ಜನ್ ಕುಮಾರ್ ಮುನ್ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಪ್ರಕಾರ, ಕೋಪಗೊಂಡ ಗುಂಪೊಂದು ದೂರುದಾರ ಜಸ್ವಂತ್ ಅವರ ಪತ್ನಿಯ ಮನೆಯ ಮೇಲೆ ದಾಳಿ ಮಾಡಿ, ಅವರ ಪತಿ ಮತ್ತು ಮಗನನ್ನು ಕೊಲೆ ಮಾಡಿತ್ತು.

ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಶಿಕ್ಷೆಯ ಆದೇಶವನ್ನು ಹೊರಡಿಸಿದರು. ತೀರ್ಪು ಪ್ರಕಟಿಸಲು ಸಜ್ಜನ್ ಕುಮಾರ್ ಅವರನ್ನು ತಿಹಾರ್ ಜೈಲಿನಿಂದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನವೆಂಬರ್ 1, 1984ರಂದು ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣದೀಪ್ ಸಿಂಗ್ ಅವರ ಕೊಲೆ ಪ್ರಕರಣದಲ್ಲಿ ಸಜ್ಜನ್ ಅವರಿಗೆ ಶಿಕ್ಷೆ ನೀಡಲಾಯಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!