ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ತಾಲೂಕಿನ ಒಡೆಯರ ಮಲ್ಲಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಉಮೇಶ ಪೂಜಾರ ಗುರುವಾರ ಕಲಬುರ್ಗಿಯಲ್ಲಿ ನಡೆದ ರಾಜ್ಯಮಟ್ಟದ ಪ್ರಾಚ್ಯ ಪ್ರಜ್ಞೆ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.

Advertisement

ಪುರಾತತ್ವ ಸಂಗ್ರಹಾಲಯಗಳು ಮತ್ತು ಪಾರಂಪರಿಕ ಇಲಾಖೆ ಮೈಸೂರು ಇವರ ವತಿಯಿಂದ ಕಲಬುರ್ಗಿಯ ಡಾ. ಬಿ.ಆರ್. ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಚ್ಯ ಪ್ರಜ್ಞೆ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದ ಪ್ರಶಸ್ತಿ ಪ್ರಮಾಣ ಪತ್ರದ ಜತೆಗೆ ರೂ. 20 ಸಾವಿರ ನಗದು ಬಹುಮಾನ ಪಡೆದುಕೊಂಡಿರುತ್ತಾನೆ.

ಈ ಸಂದರ್ಭದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪಾರಂಪರಿಕ ಇಲಾಖೆಯ ನಿರ್ದೇಶಕ ಹಾಗೂ ಆಯುಕ್ತ ದೇವರಾಜು ಎ, ಪ್ರಾಚಾರ್ಯೆ ಡಿ.ಸಿ. ನರೇಗಲ್, ಚಿತ್ರಕಲಾ ಶಿಕ್ಷಕ ಪ್ರವೀಣ ಎಂ.ಗಾಯಕರ ಸೇರಿ ಹಲವರಿದ್ದರು. ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಡಿಡಿಪಿಐ ಆರ್.ಎಸ್. ಬುರಡಿ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here