2 ಕೋಟಿ ಸಾಲ: ಮಂತ್ರಿಮಾಲ್ 2ನೇ ಮಹಡಿಯಿಂದ ಜಿಗಿದು ವ್ಯಕ್ತಿ ಸೂಸೈಡ್!

0
Spread the love

ಬೆಂಗಳೂರು:- 2 ಕೋಟಿ ರೂ. ಸಾಲದಿಂದ ಖಿನ್ನತೆಗೆ ಒಳಪಟ್ಟ ವ್ಯಕ್ತಿಯೋರ್ವ ನಗರದ ಪ್ರತಿಷ್ಠಿತ ಮಾಲ್ ಗಳಲ್ಲೊಂದಾದ ಮಲ್ಲೇಶ್ವರಂನ ಮಂತ್ರಿ ಮಾಲ್ ನಲ್ಲಿ ಸೂಸೈಡ್ ಮಾಡಿಕೊಂಡಿದ್ದಾರೆ.

Advertisement

55 ವರ್ಷದ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವ್ಯಕ್ತಿ 2 ಕೋಟಿ ಸಾಲ ಮಾಡಿಕೊಂಡಿದ್ದರು. ಅಲ್ಲದೇ ಸಾಲ ತೀರಿಸಲಾಗದೆ ಇದರಿಂದ ಖಿನ್ನತೆಗೆ ಒಳಗಾಗಿದ್ದರು. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಜುನಾಥ್‌ ಎಲೆಕ್ಟ್ರಿಕಲ್ ಅಂಗಡಿ ಇಟ್ಟುಕೊಂಡಿದ್ದರು. ಸಾಲ ತೀರಿಸಲಾಗದೆ ಡೆತ್‌ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ‘2 ಕೋಟಿ ಸಾಲ‌ ಮಾಡಿಕೊಂಡಿದ್ದೇನೆ. ಅದನ್ನ ಈ ಜನ್ಮದಲ್ಲಿ ತೀರಿಸಲು ಸಾಧ್ಯವಿಲ್ಲ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ. ನನ್ನ ಜೀವನದಲ್ಲಿ ನೊಂದಿದ್ದೀನಿ. ಸಾಲ ತೀರಿಸಲು ತುಂಬಾ ಪ್ರಯತ್ನ ಮಾಡಿದೆ. ಸದ್ಯದ ಪರಿಸ್ಥಿಯಲ್ಲಿ ಸಾಲ ತೀರಿಸುವುದಕ್ಕೆ ಆಗ್ತಾ ಇಲ್ಲ. ಸಾಲ ಕೊಟ್ಟವರು ಎಲ್ಲ ಕ್ಷಮಿಸಿ ಎಂದು ಬರೆದಿಟ್ಟಿದ್ದಾರೆ. ಡೆತ್‌ನೋಟ್‌ನಲ್ಲಿ ಮನೆಯವರ ನಂಬರ್‌ಗಳನ್ನೆಲ್ಲ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here