ಕೊಡಗಿನ ಪ್ರವಾಸಿ ತಾಣಗಳಿಗೆ 2 ದಿನ ಪ್ರವೇಶ ನಿಷೇಧ: ಅರಣ್ಯಾಧಿಕಾರಿ ಆದೇಶ

0
Spread the love

ಕೊಡಗು: ಕರ್ನಾಟಕದ ಮಲೆನಾಡು ಭಾಗ ಮತ್ತು ಕೇರಳದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದಾಗಿ ನದಿಗಳು ಉಕ್ಕೇರಿ ಹರಿಯುತ್ತಿವೆ. ಜಲಾಶಯಗಳಿಗೆ ಭಾರಿ ಪ್ರಮಾಣದ ಹರಿದುಬರುತ್ತಿದೆ. ಇನ್ನೂ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

Advertisement

ಹೀಗಾಗಿ ಜಿಲ್ಲೆಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ. ಅತಿಯಾದ ಮಳೆಯಿಂದ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳು ಬುಧ ಮತ್ತು ಗುರುವಾರ ಎರಡು ದಿನಗಳ ಕಾಲ ಬಂದ್ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here