2023ರ ಚುನಾವಣೆಯಲ್ಲಿ ಸ್ಪರ್ಧೆ: ಬಿ.ವೈ.ವಿಜಯೇಂದ್ರ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಮುಂಬರುವ ಸಿಂಧಗಿ ಮತ್ತು ಹಾನಗಲ್ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧೆ ವದಂತಿಗೆ ತೆರೆ ಎಳೆದಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ, ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆತುರವಿಲ್ಲ, 2023ರ ವಿಧಾನಸಭೆ ಚುನಾವಣೆವರೆಗೂ ಕಾಯುತ್ತೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ, 2023ರ ವಿಧಾನಸಭೆ ಚುನಾವಣೆಗೆ ಕೇವಲ 19 ತಿಂಗಳು ಮಾತ್ರ ಬಾಕಿಯಿದೆ. ನಾನೀಗ ತರಾತುರಿಯಲ್ಲಿ ಸ್ಪರ್ಧಿಸಿದರೆ, 2023 ರಲ್ಲಿ ನನ್ನ ಕ್ಷೇತ್ರ ಬದಲಾಯಿಸಬೇಕಾಗಬಹುದು. ನನ್ನ ಬೆಂಬಲಿಗರು ಶಾರ್ಟ್ಲಿಸ್ಟ್ ಮಾಡುವ ಕ್ಷೇತ್ರದಿಂದ 2023 ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದರು.

ತಂದೆ ಯಡಿಯೂರಪ್ಪ, ಸಹೋದರ ಮತ್ತು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಮತ್ತು ಬೆಂಬಲಿಗರೊoದಿಗೆ ಚರ್ಚೆ ನಡೆಸಿ ಚುನಾವಣೆಗೆ ಆರು ತಿಂಗಳ ಮೊದಲು ಒಂದು ನಿರ್ಧಾರಕ್ಕೆ ಬರುವುದಾಗಿ ವಿಜಯೇಂದ್ರ ಹೇಳಿದ್ದಾರೆ.

ಕಳೆದ ಬಾರಿ, ನಾನು ವರುಣಾದಿಂದ ಸ್ಪರ್ಧಿಸಲು ಬಯಸಿದ್ದೆ, ಆದರೆ ಪಕ್ಷ ಅವಕಾಶ ನೀಡಲಿಲ್ಲ. ಈ ಬಾರಿ ಅಂತಹ ಮುಜುಗರ ಆಗುವುದು ಬೇಡ. ಹೀಗಾಗಿ ಮುಂಚಿತವಾಗಿಯೇ ಪಕ್ಷದ ವರಿಷ್ಠರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಯಡಿಯೂರಪ್ಪ ರಾಜ್ಯ ಪ್ರವಾಸದ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಬಿಜೆಪಿ ನಾಯಕರೊಂದಿಗೆ ಸಮಾಲೋಚಿಸಿ ರಾಜ್ಯವ್ಯಾಪಿ ಪ್ರವಾಸ ಯೋಜಿಸಲಾಗಿದೆ. ರಾಜ್ಯ ಬಿಜೆಪಿ ನಾಯಕರು ಯಡಿಯೂರಪ್ಪ ಅವರ ಜೊತೆಗೆ ಸದಾ ಇರಲಿದ್ದಾರೆ ಎಂದರು.

ಮುಂದಿನ ಚುನಾವಣೆ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಅಮಿತ್ ಶಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಬೊಮ್ಮಾಯಿ ಸಿಎಂ ಆಗಿದ್ದಾರೆ. ಹೀಗಾಗಿ ಅವರನ್ನು ಮುಂದಿನ ನಾಯಕ ಎಂದು ಪ್ರೊಜೆಕ್ಟ್ ಮಾಡಬೇಕು, ಅವರೊಂದಿಗೆ ನಾನು ಉತ್ತಮ ಸಂಬoಧ ಹೊಂದಿದ್ದೇನೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here