HomeBengaluru Newsಬೆಂಗಳೂರು ವಿಮಾನ ನಿಲ್ದಾಣದಲ್ಲಿ 21 ವಿಮಾನ ಹಾರಾಟ ರದ್ದು!

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 21 ವಿಮಾನ ಹಾರಾಟ ರದ್ದು!

For Dai;y Updates Join Our whatsapp Group

Spread the love

ಬೆಂಗಳೂರು: ಇರಾನ್–ಇಸ್ರೇಲ್ ನಡುವಿನ ಯುದ್ಧ ತೀವ್ರಗೊಂಡಿರುವ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ಪರಿಣಾಮ ಬಿದ್ದಿದೆ. ಇದರ ಪರಿಣಾಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಹಲವು ವಿಮಾನಗಳ ಹಾರಾಟ ರದ್ದುಗೊಂಡಿದೆ.

ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಹಾಗೂ ಅಲ್ಲಿಂದ ಆಗಮಿಸಬೇಕಿದ್ದ ಒಟ್ಟು 21 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ವಾಯು ಪ್ರದೇಶದ ಅನಿಶ್ಚಿತತೆ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳು ಈ ನಿರ್ಧಾರ ಕೈಗೊಂಡಿವೆ.

ಅಧಿಕೃತ ಮಾಹಿತಿಯ ಪ್ರಕಾರ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿವಿಧ ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ 11 ವಿಮಾನಗಳ ಹಾರಾಟ ರದ್ದಾಗಿದೆ. ಅದೇ ರೀತಿ ವಿದೇಶಗಳಿಂದ ಬೆಂಗಳೂರಿಗೆ ಆಗಮಿಸಬೇಕಿದ್ದ 10 ವಿಮಾನಗಳೂ ರದ್ದುಗೊಂಡಿವೆ. ಒಟ್ಟು 21 ವಿಮಾನಗಳ ಹಾರಾಟ ರದ್ದಾದ ಕಾರಣ ಪ್ರಯಾಣಿಕರಿಗೆ ಸಾಕಷ್ಟು ತೊಂದರೆ ಉಂಟಾಗಿದೆ. ವಿಮಾನ ರದ್ದಾದ ಬಗ್ಗೆ ಸಂಬಂಧಿತ ಸಂಸ್ಥೆಗಳು ಪ್ರಯಾಣಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.

ಇರಾನ್–ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವುದರಿಂದ ಮುಂದಿನ ದಿನಗಳಲ್ಲಿಯೂ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಧ್ಯಪ್ರಾಚ್ಯ ದೇಶಗಳಿಗೆ ಪ್ರಯಾಣಿಸುವವರು ತಮ್ಮ ವಿಮಾನಗಳ ಸ್ಥಿತಿಯನ್ನು ಮುಂಚಿತವಾಗಿ ಪರಿಶೀಲಿಸಿಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಹೆಚ್ಚುತ್ತಿರುವ ಇರಾನ್–ಇಸ್ರೇಲ್ ಸಂಘರ್ಷ ಮತ್ತು ಪಶ್ಚಿಮ ಏಷ್ಯಾದ ವಾಯುಮಾರ್ಗಗಳ ಮುಚ್ಚುವಿಕೆಯ ಪರಿಣಾಮವಾಗಿ ಕಳೆದ ವಾರದಿಂದಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ಅಸ್ತವ್ಯಸ್ತಗೊಂಡಿವೆ. ಮಾರ್ಚ್ 1ರಿಂದ ಮಾರ್ಚ್ 9ರವರೆಗೆ 200ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ಹಾರಾಟಗಳು ರದ್ದುಗೊಂಡಿವೆ. ಮಾರ್ಚ್ 2ರಂದು 72 ವಿಮಾನಗಳು ಮತ್ತು ಮಾರ್ಚ್ 4ರಂದು 34 ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಇದೀಗ ಮತ್ತೆ 21 ವಿಮಾನಗಳನ್ನು ರದ್ದುಪಡಿಸಿರುವುದು ಸಾವಿರಾರು ಪ್ರಯಾಣಿಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!