ಹಾಸನ:- 21 ವರ್ಷದ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾಸನದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಜರುಗಿದೆ.
Advertisement
ಮದನ್ ಮೃತ ದುರ್ದೈವಿ. ಮದನ್ ಅವರು ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳದ ಬಾವನ ಮನೆಗೆ ಬಂದಿದ್ದರು. ನಿನ್ನೆ ರಾತ್ರಿ ಮನೆಯಲ್ಲಿದ್ದ ವೇಳೆ ಮದನ್‌ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.
ಎದೆನೋವಿನಿಂದ ಮದನ್ ಕುಸಿದು ಬಿದ್ದಿದ್ದಾನೆ. ಕೂಡಲೇ ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲೇ ಮದನ್ ಮೃಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 34ಕ್ಕೆ ಏರಿಕೆ ಆಗಿದೆ.