ಬೆಂಗಳೂರು:- ವಿದೇಶದಿಂದ ಬೆಂಗಳೂರಿಗೆ ಬಂದ 23 ಕೋಟಿ ರೂ. ಮೌಲ್ಯದ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಜ್ ಮಾಡಿರುವ ಘಟನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಜರುಗಿದೆ.
ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದಿದ್ದ ಹೈಡ್ರೋಪೋನಿಕ್ಸ್ ಗಾಂಜಾ, ಮೈರವಾನ್ ಗಾಂಜಾ ಹೂ ಸೇರಿದಂತೆ ವಿವಿಧ ಬಗೆಯ 23 ಕೋಟಿ ರೂ. ಮೌಲ್ಯದ 23 ಕೆಜಿ ಗಾಂಜಾ ವನ್ನು ವಶಕ್ಕೆ ಪಡೆಯಲಾಗಿದೆ. ಗಾಂಜಾವನ್ನು ಪ್ರತಿಷ್ಠಿತ ಶಾಲಾ ಕಾಲೇಜು ಹಾಗೂ ಪಾರ್ಟಿಗಳು ನಡೆಯುವ ಜಾಗಗಳಿಗೆ ತಲುಪಿಸಲು ತರಲಾಗಿತ್ತು ಎಂದು ಹೇಳಲಾಗುತ್ತಿದ್ದು, ಶ್ರೀಮಂತರು ಹೆಚ್ಚಾಗಿ ಬಳಸುವ ಗಾಂಜಾ ಇದಾಗಿದೆ.
ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ಮಾಡುವ ವೇಳೆ, ಪ್ರತ್ಯೇಕ ಕವರ್ಗಳಲ್ಲಿ ಪ್ಯಾಕ್ ಮಾಡಿಕೊಂಡು ಲಗೇಜ್ ಬ್ಯಾಗ್ನಲ್ಲಿ ಇಟ್ಟಿಕೊಂಡು ಅಕ್ರಮವಾಗಿ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಲಗೇಜ್ ಚೆಕ್ ಮಾಡುವ ವೇಳೆ ಗಾಂಜಾ ಸಮೇತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.