ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳಲ್ಲಿ 23 ಬಾಣಂತಿಯರು ಸಾವು! ಆಘಾತಕಾರಿ ಮಾಹಿತಿ ಬಹಿರಂಗ

0
Spread the love

ಬಳ್ಳಾರಿ: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರು ಮೃತಪಟ್ಟ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇದರ ಬೆನ್ನಲ್ಲೇ ಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದ ಅಡಿಟ್ ವರದಿಯಲ್ಲಿ ಉಲ್ಲೇಖವಾಗಿದೆ.

Advertisement

2024ರ ಏಪ್ರಿಲ್‌‌ನಿಂದ ಈವರೆಗೆ ಬಳ್ಳಾರಿ ಜಿಲ್ಲೆಯಲ್ಲಿ 23 ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಹೆರಿಗೆ ಸಂದರ್ಭದಲ್ಲಿ ಅಪೌಷ್ಟಿಕತೆ, ಅನಿಮಿಯಾ ಸೇರಿ ಇತರೆ ಕಾಯಿಲೆಯಿಂದ ಬಾಣಂತಿಯರು ಸಾವಿಗೀಡಾಗಿದ್ದಾರೆ ಎಂದು ತಿಳಿಸಿದ್ದಾರೆ.

ನವೆಂಬರ್​ 9 ರಂದು ಜಿಲ್ಲಾ ಆಸ್ಪತ್ರೆಯಲ್ಲಿ 14 ಬಾಣಂತಿಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಈ ಪೈಕಿ ಒಂಬತ್ತು ಬಾಣಂತಿಯರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಕಂಡುಬಂದಿತ್ತು. ತಕ್ಷಣ ಏನಾಯಿತು ಅಂತ ಗಮನಿಸುವಷ್ಟರಲ್ಲಿ ಇಬ್ಬರು ಬಾಣಂತಿಯರು ಮೃತಪಟ್ಟಿದ್ದರು.

ಬಳಿಕ, ಉಳಿದ ಏಳು ಬಾಣಂತಿಯರನ್ನು ಬಿಮ್ಸ್ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿತ್ತು. ಏಳು ಬಾಣಂತಿಯರಲ್ಲಿ ನವೆಂಬರ್​ 13 ಓರ್ವ ಬಾಣಂತಿ ಮತ್ತು ನವೆಂಬರ್​ 25 ಓರ್ವ ಬಾಣಂತಿ ಮೃತಪಟ್ಟಿದ್ದರು. ಕೇವಲ 10-15 ದಿನಗಳ ಅಂತರದಲ್ಲಿ ಐವರು ಬಾಣಂತಿಯರು ಮೃತ್ತಿಟ್ಟಿದ್ದರು.

 


Spread the love

LEAVE A REPLY

Please enter your comment!
Please enter your name here