ರಾಮನಗರ:- ರಾಮನಗರ ರೈಲ್ವೆ ನಿಲ್ದಾಣದ ಸಮೀಪ ರೈಲಿಗೆ ತಲೆಕೊಟ್ಟು ಬಿ.ಇ ಪದವೀಧರ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
Advertisement
23 ವರ್ಷದ ಮಧು ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಧು, ನಿನ್ನೆ ರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ರೈಲು ಹರಿದ ರಭಸಕ್ಕೆ ಯುವಕನ ದೇಹ ಛಿದ್ರ ಛಿದ್ರವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.