ಮಂಡ್ಯ: ಕೇರಳ ಲಾಟರಿಯಲ್ಲಿ 25 ಕೋಟಿ ರೂ. ಬಹುಮಾನವನ್ನು ಗೆದ್ದು ಮಂಡ್ಯದ ಗಂಡು ಅಲ್ತಾಫ್ ರಾತ್ರೋರಾತ್ರಿ ಕೋಟ್ಯಾಧಿಪತಿ ಆಗಿದ್ದಾರೆ. ಅಲ್ತಾಫ್ ಪಾಷಾ ಅವರು ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣ ನಿವಾಸಿ ಆಗಿದ್ದಾರೆ.
ವೃತ್ತಿಯಲ್ಲಿ ಬೈಕ್ ಮೆಕಾನಿಕ್ ಆಗಿರುವ ಅಲ್ತಾಫ್, ಮೊನ್ನೆ ಪರಿಚಯಸ್ತರ ಮೂಲಕ ಕೇರಳ ರಾಜ್ಯದ ಲಾಟರಿ ಟಿಕೆಟ್ ಖರೀದಿ ಮಾಡಿದ್ದರು.
ಇನ್ನು ತಾನು ಖರೀದಿ ಮಾಡಿದ ಲಾಟರಿ ಟಿಕೆಟ್‌ಗೆ ಬಹುಮಾನ ಬಂದಿರೊ ವಿಚಾರ ತಿಳಿಯುತ್ತಿದ್ದಂತೆ ಅಲ್ತಾಫ್ ಕೇರಳಕ್ಕೆ ಹೊರಟಿದ್ದಾರೆ. ಇದೀಗ ಕೇರಳಕ್ಕೆ ಪ್ರಯಾಣ ಮಾಡಿದ್ದು, ಲಾಟರಿ ಹಣ ಪಡೆಯುವ ಪ್ರಕ್ರಿಯೆಯನ್ನು ಪೂರೈಸಿ ಹಣವನ್ನು ಪಡೆದುಕೊಳ್ಳಲಿದ್ದಾರೆ. ಇದೀಗ ರಾಜ್ಯದಲ್ಲಿ ದಸರಾ ಹಬ್ಬದ ಆಚರಣೆಯಲ್ಲಿದ್ದ ಅಲ್ತಾಫ್‌ಗೆ ದೊಡ್ಡ ಉಡುಗೊರೆಯೇ ಸಿಕ್ಕಂತಾಗಿದೆ.



