ಬೆಳಗಾವಿ: ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಮಾರಣಾಂತಿಕ ಕಾಯಿಲೆಗೆ 28 ಕೃಷ್ಣಮೃಗಳ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಟ್ಟಿ ಗ್ರಾಮದಲ್ಲಿ ನಡೆದಿದೆ. ನವೆಂಬರ್ 13 ರಂದು ಮೊದಲು 8 ಕೃಷ್ಣಮೃಗಳ ಸಾವನ್ನಪ್ಪಿದ್ದು, ಇಂದು ಮತ್ತೆ 20 ಕೃಷ್ಣಮೃಗಳ ಮೃತಪಟ್ಟಿವೆ.
ಏಕಾಏಕಿ ಕೃಷ್ಣ ಮೃಗಗಳು ಸಾವನ್ನಪ್ಪಿರುವುದು ಅಧಿಕಾರಿಗಳನ್ನು ಬೆಚ್ಚಿಬೀಳಿಸಿದೆ. ಪ್ರಕರಣಗಳು ಹೆಚ್ಚಾಗುತ್ತಿದ್ದಂತೆಯೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೃಷ್ಣ ಮೃಗಗಳು ಬ್ಯಾಕ್ಟೀರಿಯಾ ಸೋಂಕಿನಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಎರಡು ದಿನಗಳ ಹಿಂದೆ ಮೃತಪಟ್ಟ ಮೃಗಗಳ ಮೃತದೇಹಗಳನ್ನು ವಿಶ್ಲೇಷಣೆಗೆ ಲ್ಯಾಬ್ ಗೆ ಕಳುಹಿಸಲಾಗಿತ್ತು. ಲ್ಯಾಬ್ ವರದಿ ಇನ್ನಷ್ಟೇ ಬರಬೇಕಿದ್ದು, ಇಂದು ಮತ್ತೆ 20 ಮೃಗಗಳು ಸಾವನ್ನಪ್ಪಿರುವುದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ. ಮರಣೋತ್ತರ ಪರೀಕ್ಷೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಈಗಾಗಲೇ ಸಿದ್ಧತೆ ನಡೆಸಿದ್ದಾರೆ.



