ಹಾಸನಾಂಬೆ ದೇವಿ ದರ್ಶನಕ್ಕೆ 2ನೇ ದಿನ ಭಕ್ತರ ಮಹಾಪೂರ: ಮಧ್ಯರಾತ್ರಿಯಿಂದಲೇ ಸಾಲಲ್ಲಿ ನಿಂತ ಭಕ್ತರು

0
Spread the love

ಹಾಸನ: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸೋ ಹಾಸನಾಂಬೆ ದರ್ಶನ ಆರಂಭವಾಗಿದೆ. ಮೊದಲ ದಿನ ಸರ್ವಾಲಂಕಾರ ಭೂಷಿತೆಯಾಗಿರುವ ದೇವಿಯನ್ನು ಕಣ್ತುಂಬಿಕೊಂಡ ಭಕ್ತರು, ಗರ್ಭಗುಡಿಯಲ್ಲಿ ಎಂದೂ ಆರದ ದೀಪವನ್ನು ನೋಡಿ ವಿಸ್ಮಿತರಾದರು. ಇನ್ನೂ ಎರಡನೇ ದಿನವಾದ ಶನಿವಾರದಂದು ಭಕ್ತರ ದಂಡು ಹರಿದು ಬರುತ್ತಿದೆ. ನಸುಕಿನ ನಾಲ್ಕು ಗಂಟೆಯಿಂದಲೇ ಹಾಸನ ದೇವಿ ದರ್ಶನ ಆರಂಭಗೊಂಡಿದೆ. ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ.

Advertisement

ವೀಕೆಂಡ್ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಸಾವಿರ ರೂ., ಮುನ್ನೂರು ರೂ. ಪಾವತಿಸಿದರೆ ವಿಶೇಷ ದರ್ಶನವಿರುತ್ತದೆ. ಈ ಸಾಲಿನಲ್ಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರಿದ್ದಾರೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆಯುತ್ತಿದ್ದಾರೆ. ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ ಭಕ್ತರು, ರಾಜಕೀಯ ಗಣ್ಯರು, ಸೆಲೆಬ್ರಿಟಿಗಳು ಆಗಮಿಸಿ ದೇವಿಯ ದರ್ಶನಕ್ಕೆ ಆಗಮಿಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here