2nd Puc Result: ಬದುಕು ದೊಡ್ಡದು, ದುಡುಕಿನ ನಿರ್ಧಾರ ಬೇಡ: ಪಾಸಾದವರಿಗೆ ವಿಶ್ ಮಾಡಿ, ಫೇಲ್ ಆದವರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ!

0
Spread the love

ಬೆಂಗಳೂರು:– ಇಂದು ಕರ್ನಾಟಕದಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಫಲಿತಾಂಶ ಹೊರ ಬಿದ್ದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು, ಪಾಸಾದವರಿಗೆ ವಿಶ್ ಮಾಡಿ, ಫೇಲ್ ಆದವರಿಗೆ ಧೈರ್ಯ ತುಂಬಿದ್ದಾರೆ.

Advertisement

X ಮಾಡಿರುವ ಸಿಎಂ ಸಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ‌ ಎಂದು ಹಾರೈಸುತ್ತೇನೆ ಎಂದರು.

ಇನ್ನೂ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಬದುಕು ದೊಡ್ಡದು, ಮತ್ತೆ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕದ ಜೊತೆಗೆ ಪಾಸಾಗುವ ಅವಕಾಶ ಖಂಡಿತಾ ಸಿಗಲಿದೆ. ಹತಾಶೆಯ ಕೈಗೆ ಬುದ್ದಿ ಕೊಡದೆ ಸಂಯಮದಿಂದ ವರ್ತಿಸಿ ಎಂದು ಟ್ವೀಟ್ ಮೂಲಕ ಸ್ಥೈರ್ಯ ತುಂಬಿದ್ದಾರೆ.

ವಿವಿಧ ವಿಭಾಗಗಳಲ್ಲಿ ರ‍್ಯಾಂಕ್ ಪಡೆದಿರುವ ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ.ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣುಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೆ ಸ್ಫೂರ್ತಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here