2nd Puc Result: ಇದು ಲಾರಿ ಡ್ರೈವರ್ ಮಗಳ ಸಾಧನೆ: ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ!

0
Spread the love

ವಿಜಯನಗರ:- ಇಂದು ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಗೊಂಡಿದೆ. ಈ ಹೊತ್ತಲ್ಲೇ ಲಾರಿ ಡ್ರೈವರ್ ಮಗಳೋರ್ವಳು ಕಲಾ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಬಂದಿದ್ದು, ಮಾದರಿ ಆಗಿದ್ದಾರೆ.

Advertisement

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂಜನಾಬಾಯಿ, 600ಕ್ಕೆ 597 ಅಂಕ ಪಡೆಯುವ ಮೂಲಕ ಕಲಾ ವಿಭಾಗದದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಸಂಜನಾ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದವರಾಗಿದ್ದು, ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮಗಳ ಫಲಿತಾಂಶ ಕಂಡು ಬಡ ತಂದೆ ಖುಷ್ ಆಗಿದ್ದಾರೆ.

ಅದರಂತೆ ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೆ.ನಿರ್ಮಲಾ, ಕಲಾ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ


Spread the love

LEAVE A REPLY

Please enter your comment!
Please enter your name here